ಆಗಸ್ಟ್‌ 15 ರಂದು ಕೊರೋನಾ ಸೋಂಕಿನಿಂದ ಸ್ವಾತಂತ್ಯ್ರ ಪಡೆಯುವ ಸಂಕಲ್ಪ ಮಾಡೋಣ ➤ ಪ್ರಧಾನಿ ನರೇಂದ್ರ ಮೋದಿ

(ನ್ಯೂಸ್ ಕಡಬ) newskadaba.com ನವ ದೆಹಲಿ, ಜು.26:  ಕೊರೋನಾ ವೈರಸ್ ಆರಂಭಕ್ಕಿಂತಲೂ ಪ್ರಸ್ತುತ ಅತಿಹೆಚ್ಚು ಅಪಾಯಕಾರಿಯಾಗಿದ್ದು, ಈ ವರ್ಷ ಆಗಸ್ಟ್ 15 ರಂದು ದೇಶ ಸ್ವಾತಂತ್ಯ್ರ ದಿನಾಚರಣೆಯನ್ನು ಆಚರಿಸುವ ಸಂದರ್ಭದಲ್ಲಿ ಕೊರೋನಾದಂತಹ ಸಾಂಕ್ರಾಮಿಕ ರೋಗದಿಂದ ನಾವು ಸ್ವಾತಂತ್ಯ್ರದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

 

 

 

ಭಾರತದಲ್ಲಿ ಈಗಾಗಲೇ ಕೊರೋನಾ ಸೋಂಕಿತರ ಸಂಖ್ಯೆ 13 ಲಕ್ಷದ ಗಡಿದಾಟಿದೆ. ಕೊರೋನಾದಿಂದ ಮೃತಪಡುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ದ್ವಿಗುಣವಾಗುತ್ತಲೇ ಇದೆ. ಕೊರೋನಾದಿಂದಾಗಿ ಅತಿಹೆಚ್ಚು ಹಾನಿಗೊಳಗಾದ ದೇಶಗಳ ಪೈಕಿ ಅಮೆರಿಕ, ಬ್ರೆಜಿಲ್ ನಂತರದ ಮೂರನೇ ಸ್ಥಾನದಲ್ಲಿ ಭಾರತ ಸ್ಥಾನ ಪಡೆದಿದೆ. ಈ ಹಿನ್ನೆಲೆಯಲ್ಲಿ ಇಂದಿನ ಮನ್ ಕಿ ಬಾತ್‌ನಲ್ಲಿ ದೇಶದ ಜನರಿಗೆ ಸಂದೇಶ ರವಾನಿಸಿರುವ ಪ್ರಧಾನಿ ನರೇಂದ್ರ ಮೋದಿ, “ಈ ವರ್ಷದ ಆಗಸ್ಟ್ 15ರ ಸ್ವಾತಂತ್ಯ್ರ ದಿನಾಚರಣೆಯನ್ನು ನಾವು ವಿಭಿನ್ನ ಸನ್ನವೇಶದಲ್ಲಿ ಆಚರಿಸುತ್ತಿದ್ದೇವೆ. ಹೀಗಾಗಿ ಈ ಸ್ವಾತಂತ್ಯ್ರದ ದಿನದಂದು ನಾವು ಸಾಂಕ್ರಾಮಿಕ ರೋಗದಿಂದ ಸ್ವಾತಂತ್ರ್ಯದ ಪ್ರತಿಜ್ಞೆಯನ್ನು ತೆಗೆದುಕೊಳ್ಳಬೇಕೆಂದು ಯುವಕರನ್ನು ಈ ದೇಶದ ಜನರನ್ನು ನಾನು ಕೋರುತ್ತೇನೆ. ಸ್ವಾವಲಂಬಿ ಭಾರತಕ್ಕಾಗಿ ಇಡೀ ದೇಶದ ಜನ ಒಗ್ಗಟ್ಟಾಗಿ ಒಂದು ಸಂಕಲ್ಪವನ್ನು ತೆಗೆದುಕೊಳ್ಳಿ. ಹೊಸದನ್ನು ಕಲಿಯುವ ಹಾಗೂ ಕಲಿಸುವ ಸಂಕಲ್ಪ ಮತ್ತು ನಮ್ಮದನ್ನು ಶ್ರದ್ಧೆಯಿಂದ ನಿರ್ವಹಿಸುವ ಸಂಕಲ್ಪಗಳನ್ನು ತೆಗೆದುಕೊಳ್ಳಿ. ನಿಮ್ಮ ಕರ್ತವ್ಯಗಳನ್ನು ಚಾಚೂ ತಪ್ಪದೆ ಪಾಲಿಸಿ” ಎಂದು ನರೇಂದ್ರ ಮೋದಿ ಕರೆ ನೀಡಿದ್ದಾರೆ.

Also Read  ಸುರತ್ಕಲ್: ತಾನೇ ಬೀಸಿದ ಬಲೆಗೆ ಸಿಲುಕಿ ಮೀನುಗಾರ ಮೃತ್ಯು

 

error: Content is protected !!
Scroll to Top