ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ➤ ಆರೋಪಿಯ ಬಂಧನ

(ನ್ಯೂಸ್ ಕಡಬ) newskadaba.com ಬೆಳ್ಳಾರೆ , ಜು.29:  ದರ್ಖಾಸು ಸಮೀಪ ಚೀಮುಳ್ಳು ಎಂಬಲ್ಲಿ ಪಕ್ಕದ ಮನೆಯ ಅಪ್ರಾಪ್ತೆಯನ್ನು ಚಾಕಲೇಟು ನೀಡಿ ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದು ಲೈಂಗಿಕ ಕಿರುಕುಳವೆಸಗಿದ ಆರೋಪಿಯನ್ನು ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಬೆಳ್ಳಾರೆ ಠಾಣೆ ಪೊಲೀಸರು ಬಂಧಿಸಿದ್ದಾರೆ.

ಬೆಳ್ಳಾರೆ ದರ್ಖಾಸು ಸಮೀಪ ಬಾಡಿಗೆ ಮನೆಯಲ್ಲಿ ವಾಸವಿರುವ ಸೆಲ್ವ ಕುಮಾರ್ (50) ಎಂಬ ಆರೋಪಿಯನ್ನ ಬಂಧಿಸಿದ್ದಾರೆ. ಜು. 28 ರಂದು ನಡೆದ ಘಟನೆಯನ್ನು ಅಪ್ರಾಪ್ತೆ ಹೆತ್ತವರಲ್ಲಿ ತಿಳಿಸಿದ್ದು, ಹೆತ್ತವರು ವಿಚಾರಣೆ ನಡೆಸಿದಾಗ ಘಟನೆ ಬೆಳಕಿಗೆ ಬಂದಿದೆ. ಅದರಂತೆ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಆರೋಪಿ ವಿರುದ್ದ ಪೋಕ್ಸೊ ಕಾಯಿದೆಯಡಿ ಪ್ರಕರಣ ದಾಖಲಿಸಿ ಆರೋಪಿಯನ್ನ ಬಂಧಿಸಿರುವುದಾಗಿ ತಿಳಿದು ಬಂದಿದೆ.

 

error: Content is protected !!

Join the Group

Join WhatsApp Group