ಹಳೆ ನೋಟು ಚಲಾವಣೆಗೆ ಯತ್ನ ➤ ಮೂವರು ಆರೋಪಿಗಳನ್ನು ಬಂಧಿಸಿ 30 ಲಕ್ಷ ರೂ. ನೋಟು ವಶ

(ನ್ಯೂಸ್ ಕಡಬ) newskadaba.com ಬೆಂಗಳೂರು , ಜು.29: ನಿಷೇಧಿಸಲ್ಪಟ್ಟ ಹಳೆಯ ನೊಟುಗಳನ್ನು ಚಲಾವಣೆಯಲ್ಲಿರುವ ನೋಟುಗಳಿಗೆ ಕಮಿಷನ್‌ಗಾಗಿ ಸಾರ್ವಜನಿಕರಲ್ಲಿ ವಿನಿಮಯ ಮಾಡುತ್ತಿದ್ದ ಮೂವರು ಆರೋಪಿಗಳನ್ನು ಬಂಧಿಸಿರುವ ಉತ್ತರ ವಿಭಾಗ ಪೊಲೀಸರು, ಆರೋಪಿಗಳಿಂದ 30 ಲಕ್ಷ ರೂ.ಮೌಲ್ಯದ ನಿಷೇಧಿತ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ. ಮಾಗಡಿ ರಸ್ತೆಯ ಕೆ.ಪಿ.ಅಗ್ರಹಾರ ನಿವಾಸಿ ಕಿರಣ್ ಕುಮಾರ್, ನಾಗರಬಾವಿ, ಮಾನಸನಗರದ ಪ್ರವೀಣ್ ಕುಮಾರ್ ಬಿ.ಆರ್., ಕಾಮಾಕ್ಷಿಪಾಳ್ಯದ ಪವನ್ ಕುಮಾರ್ ಬಂಧಿತ ಆರೋಪಿಗಳು.

 

ಜಾಲಹಳ್ಳಿಯ ಎಚ್‌ಎಂಟಿ ಸರ್ವೀಸ್ ರಸ್ತೆಯಲ್ಲಿರುವ ಪ್ರೆಸ್ಟೀಜ್ ಕೆನ್ಸಿಂಗ್ಟನ್ ಅಪರ್ಟ್‌ಮೆಂಟ್ ಬಳಿ ಮೂವರು ಆರೋಪಿಗಳು ಮಾರುತಿ ಸುಜುಕಿ ಜೆನ್‌ ಕಾರಿನಲ್ಲಿ 1000 ರೂಪಾಯಿ ಮುಖಬೆಲೆಯ ಹಳೆ ನೋಟುಗಳನ್ನು ತಂದು ಕಮಿಷನ್‌ಗಾಗಿ ಸಾರ್ವಜನಿಕರಿಗೆ ಚಲಾವಣೆ ಮಾಡಲು ಬಂದಿದ್ದಾರೆ ಎಂಬುದರ ಕುರಿತು ದೊರೆತ ಖಚಿತ ಮಾಹಿತಿ ಮೇರೆಗೆ  ಪೊಲೀಸರು ದಾಳಿ ನಡೆಸಿ, ಆರೋಪಿಗಳನ್ನು ಬಂಧಿಸಿದ್ದಾರೆ.ಆರೋಪಿಗಳ ಕಾರಿನಲ್ಲಿ ಒಂದು ಲಗ್ಗೇಜ್‌ ಬ್ಯಾಗಿನಲ್ಲಿ ನಿಷೇಧಿಸಲ್ಪಟ್ಟ 1000 ರೂ.ಮುಖಬೆಲೆಯ 30 ಲಕ್ಷ ರೂ.ಮೌಲ್ಯದ ಹಳೆಯ ನೋಟುಗಳಿದ್ದವು, ಅವುಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಈ ಸಂಬಂಧ ಜಾಲಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

Also Read  ಅಪಘಾತ ತಡೆಯಲು ರಾಜ್ಯ ಸರ್ಕಾರದ ಚಿಂತನೆ ► 100 ಸಿಸಿ ವಾಹನಗಳಲ್ಲಿ ಹಿಂಬದಿಯಲ್ಲಿ ಸವಾರಿ ಮಾಡುವಂತಿಲ್ಲ..!!!

 

 

error: Content is protected !!
Scroll to Top