ದ.ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅಧಿಕಾರ ಸ್ವೀಕಾರ

(ನ್ಯೂಸ್ ಕಡಬ) newskadaba.com ಮಂಗಳೂರು, ಜು.30:  ದಕ್ಷಿಣ ಕನ್ನಡ ಜಿಲ್ಲೆಯ ನೂತನ ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಇಂದು ಅಧಿಕಾರ ಸ್ವೀಕರಿಸಿದರು. ನಿರ್ಗಮಿತ ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ಅವರು ಪ್ರಭಾರ ಹಸ್ತಾಂತರಿಸಿದರು.

 

 

ಜಿಲ್ಲಾಧಿಕಾರಿಗಳಾಗಿ ಡಾ. ಕೆ.ವಿ. ರಾಜೇಂದ್ರ ಅವರು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯವರು. 2013ರ ಬ್ಯಾಚ್ ನ ಐಎಎಸ್ ಅಧಿಕಾರಿಯಾಗಿರುವ ಇವರು ಬೆಳಗಾವಿ ಜಿಲ್ಲಾ ಪಂಚಾಯತಿ ಸಿಇಓ ಆಗಿ ಕಾರ್ಯನಿರ್ವಹಿಸುತ್ತಿದ್ದರು. ಸದ್ಯ ದಕ್ಷಿಣ ಕನ್ನಡ ಜಿಲ್ಲೆಗೆ ವರ್ಗಾವಣೆಯಾಗಿದ್ದು, ಜಿಲ್ಲೆಯ 130ನೇ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ. ಅಪರ ಜಿಲ್ಲಾಧಿಕಾರಿ ಎಂ.ಜೆ. ರೂಪಾ ಹಾಗೂ ವಿವಿಧ ಇಲಾಖಾಧಿಕಾರಿಗಳು ಉಪಸ್ಥಿತರಿದ್ದರು.ದ.ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಸಿಂಧೂ ರೂಪೇಶ್ ಅವರನ್ನು ಸರ್ಕಾರ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆಯ ಇ -ಆಡಳಿತ ವಿಭಾಗದ ನಿರ್ದೆಶಕಿಯನ್ನಾಗಿ ನಿಯೋಜಿಸಿ ಬೆಂಗಳೂರಿಗೆ ವರ್ಗಾವಣೆ ಮಾಡಿದೆ.

Also Read  ಸಿ.ಎಫ್.ಟಿ.ಆರ್.ಐ ಆವರಣದಲ್ಲಿ ಚಿರತೆ ಪ್ರತ್ಯಕ್ಷ..!!        ➤ ಸ್ಥಳೀಯರಲ್ಲಿ ಹೆಚ್ಚಿದ ಆತಂಕ     

 

 

error: Content is protected !!
Scroll to Top