ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಡಿ.ಕೆ.ಶಿವಕುಮಾರ್ ಭೇಟಿ

(ನ್ಯೂಸ್ ಕಡಬ) newskadaba.com ಧರ್ಮಸ್ಥಳ, .01:  ಕೊರೋನಾ ಹೆಸರಲ್ಲಿ ರಾಜ್ಯ ಬಿಜೆಪಿ ಸರ್ಕಾರ ನಡೆಸಿದ ಭಾರಿ ಪ್ರಮಾಣದ ಭ್ರಷ್ಟಾಚಾರವನ್ನು ಕಾಂಗ್ರೆಸ್ ದಾಖಲೆ ಸಹಿತ ಜನರ ಮುಂದಿಟ್ಟಿದೆ. ಇದು ಸುಳ್ಳಾಗಿದ್ದರೆ ನನ್ನನ್ನು ನೇಣಿಗೇರಿಸಲಿ. ಮಾನನಷ್ಟ ಮೊಕದ್ದಮೆ ಹೂಡಲಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸವಾಲು ಹಾಕಿದ್ದಾರೆ.

 

 

 

ಕೆಪಿಸಿಸಿ ಅಧ್ಯಕ್ಷರಾದ ಬಳಿಕ ಇದೇ ಮೊದಲ ಬಾರಿಗೆ ದ.ಕ. ಜಿಲ್ಲೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯರು, ಧಾರ್ಮಿಕ ಮುಖಂಡರನ್ನು ಭೇಟಿಯಾದರು. ಮಂಗಳೂರಿನಲ್ಲಿ ಕೇಂದ್ರದ ಮಾಜಿ ಸಚಿವರಾದ ಆಸ್ಕರ್ ಫರ್ನಾಂಡಿಸ್, ಬಂಟ್ವಾಳದಲ್ಲಿ ಜನಾರ್ದನ ಪೂಜಾರಿಯವರ ಆರೋಗ್ಯ ವಿಚಾರಿಸಿದ್ದು, ಮಂಗಳೂರು ಬಿಷಪ್ ಡಾ.ಪೀಟರ್ ಪೌಲ್ ಸಲ್ದಾನ ಹಾಗೂ ಉಡುಪಿ – ಚಿಕ್ಕಮಗಳೂರು ಜಿಲ್ಲಾ ಖಾಜಿ ಬೇಕಲ ಇಬ್ರಾಹಿಂ ಮುಸ್ಲಿಯಾರ್ ಉಸ್ತಾದ್ ಬೇಕಲ್ ಅವರನ್ನು ಮೋಂಟುಗೋಳಿಯಲ್ಲಿರುವ ಮನೆಯಲ್ಲಿ ಭೇಟಿಯಾದರು. ಕುದ್ರೋಳಿ ಶ್ರೀ ಗೋಕರ್ಣನಾಥೇಶ್ವರ ದೇವಸ್ಥಾನಕ್ಕೂ ಭೇಟಿ ನೀಡಿದರು. ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ ಪ್ರಾರ್ಥನೆ ಸಲ್ಲಿಸಿದ ಬಳಿಕ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಆಶೀರ್ವಾದ ಪಡೆದರು. ಮಾಜಿ ಸಚಿವರಾದ ರಮಾನಾಥ ರೈ, ವಿನಯಕುಮಾರ್ ಸೊರಕೆ, ಅಭಯಚಂದ್ರ ಜೈನ್, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಹರೀಶ್ ಕುಮಾರ್, ಮುಖಂಡರಾದ ಮಿಥುನ್ ರೈ, ರಂಜನ್ ಗೌಡ, ಚಂದನ್ ಕಾಮತ್, ಶೈಲೇಶ್ ಕುಮಾರ್, ಪ್ರಭಾಕರ ಧರ್ಮಸ್ಥಳ, ಕೇಶವ ಗೌಡ ಬೆಳಾಲು ಮುಂತಾದವರು ಉಪಸ್ಥಿತರಿದ್ದರು. ಕ್ಷೇತ್ರದ ಪರವಾಗಿ ಮ್ಯಾನೇಜರ್ ರಾಜೇಂದ್ರ ದಾಸ್ ಸ್ವಾಗತಿಸಿದರು.

 

error: Content is protected !!

Join the Group

Join WhatsApp Group