(ನ್ಯೂಸ್ ಕಡಬ) newskadaba.com ಬೆಂಗಳೂರು, ಆ.03. ಕೇಂದ್ರ ಗೃಹ ಸಚಿವ ಅಮಿತ್ ಷಾಗೆ ಕೊರೋನಾ ಪಾಸಿಟಿವ್ ಬಂದ ಬೆನ್ನಲ್ಲೇ ಇದೀಗ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪರಿಗೂ ಕೊರೋನಾ ದೃಢಪಟ್ಟಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಅವರು, ನನ್ನ ಕೊರೋನಾ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಎಂದು ಬಂದಿದ್ದು, ರೋಗಲಕ್ಷಣಗಳು ಇಲ್ಲದಿದ್ದರೂ ಮುನ್ನೆಚ್ಚರಿಕೆ ದೃಷ್ಟಿಯಿಂದ ವೈದ್ಯರ ಸಲಹೆಯಂತೆ ಆಸ್ಪತ್ರೆಗೆ ದಾಖಲಾಗುತ್ತಿದ್ದೇನೆ.ಕಳೆದ ಕೆಲವು ದಿನಗಳಲ್ಲಿ ನನ್ನ ಸಂಪರ್ಕಕ್ಕೆ ಬಂದಿರುವವರು, ಕ್ವಾರಂಟೈನ್ ನಲ್ಲಿದ್ದು, ಮುಂಜಾಗ್ರತೆ ವಹಿಸಿ ಎಂದು ಕೋರಿದ್ದಾರೆ.






