ಕೋವಿಡ್-19 ಆಸ್ಪತ್ರೆಯಲ್ಲಿ ಬೆಂಕಿ ಅವಘಡ ➤ ಎಂಟು ರೋಗಿಗಳು ಸಜೀವ ದಹನ

(ನ್ಯೂಸ್ ಕಡಬ) newskadaba.com ಕಡಬ, ಆ.06:  ಅಹಮದಾಬಾದ್ ನ ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಎಂಟು ಕೋವಿಡ್-19 ರೋಗಿಗಳು ಮೃತಪಟ್ಟಿದ್ದಾರೆ ಎಂದು ಅಗ್ನಿಶಾಮಕ ದಳದ ಅಧಿಕಾರಿ ಗುರುವಾರ ತಿಳಿಸಿದ್ದಾರೆ. ಮೃತರಲ್ಲಿ ಐವರು ಪುರುಷರು ಮತ್ತು ಮೂವರು ಮಹಿಳೆಯರು ಇದ್ದಾರೆ. ಅವರು ಅಹಮದಾಬಾದ್‌ನ ನವರಂಗಪುರ ಪ್ರದೇಶದ ನಿಗದಿಪಡಿಸಿದ ಕೋವಿಡ್-19 ಶ್ರೇಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು ಎಂದು ಅಧಿಕಾರಿ ತಿಳಿಸಿದ್ದಾರೆ.

 

ಗುರುವಾರ ಮುಂಜಾನೆ 3.30ರ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ. ಸುಮಾರು 40 ಕೋವಿಡ್-19 ರೋಗಿಗಳನ್ನು ರಕ್ಷಿಸಲಾಗಿದ್ದು, ಅವರನ್ನು ನಗರದ ನಾಗರಿಕ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂದು ಅವರು ಹೇಳಿದರು.ಯ್ ಆಸ್ಪತ್ರೆಯ ಐಸಿಯು ವಾರ್ಡ್‌ನಲ್ಲಿ ದಾಖಲಾದ ಎಂಟು ಕೊರೊನಾ ವೈರಸ್ ರೋಗಿಗಳು ಬೆಂಕಿ ಅವಘಡದಲ್ಲಿ ಮೃತಪಟ್ಟಿದ್ದಾರೆ. ಐಸಿಯು ಸಂಪೂರ್ಣ ಸುಟ್ಟುಹೋಗಿದೆ. ಬೆಂಕಿ ಹೊತ್ತಿಕೊಳ್ಳಲು ಕಾರಣ ತಿಳಿದುಬಂದಿಲ್ಲ ಎಂದು ಅಹಮದಾಬಾದ್ ಅಗ್ನಿಶಾಮಕ ವಿಭಾಗದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

Also Read  26 ಲಕ್ಷ ಭಾರತೀಯರ Whatsapp ಖಾತೆ ಬ್ಯಾನ್‌ !

 

error: Content is protected !!
Scroll to Top