ನಾಳೆ (ಆ7)ಕ್ಕೆ ಹೊರಬಿಳಲಿದೆ ಎಸ್.ಎಸ್.ಎಲ್.ಸಿ ಫಲಿತಾಂಶ➤ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಸುದ್ದಿ ಸುಳ್ಳೆಂದ ಶಿಕ್ಷಣ ಸಚಿವರು

(ನ್ಯೂಸ್ ಕಡಬ) newskadaba.com.ಬೆಂಗಳೂರು, ಆ.6:  ಕೊರೊನಾ ಹೆಮ್ಮಾರಿಯ ಮಧ್ಯೆ ಸುಸೂತ್ರವಾಗಿ ಎಸ್.ಎಸ್.ಎಲ್.ಸಿ ಪರೀಕ್ಷೆ ಬರೆದಿರುವ ವಿಧ್ಯಾರ್ಥಿಗಳು ಇದೀಗ ಫಲಿತಾಂಶದ ನಿರೀಕ್ಷೆಯಲ್ಲಿದ್ದಾರೆ.


ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿಯು ಶೀಘ್ರದಲ್ಲೇ ಎಸ್ಸೆಸ್ಸೆಲ್ಸಿ ಫಲಿತಾಂಶವನ್ನು ಬಿಡುಗಡೆ ಮಾಡಲಿದೆ, ಆದರೆ ಎಸ್ಸೆಸ್ಸೆಲ್ಸಿ ಫಲಿತಾಂಶವು ಆಗಸ್ಟ್ 7ಕ್ಕೆಂದು ಇಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರಿ ಸುದ್ದಿಯಾಗುತ್ತಿತ್ತು. ಈ ಬಗ್ಗೆ ತಮ್ಮ ಫೇಸ್ ಬುಕ್ ಖಾತೆಯಲ್ಲಿ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್, ‘ನಾಳೆ ಎಸ್ ಎಸ್ ಎಲ್ ಸಿ ಫಲಿತಾಂಶ ಎಂಬ ಸುದ್ದಿ ಸತ್ಯವಲ್ಲ, ಇನ್ನೂ ದಿನಾಂಕ ನಿಶ್ಚಯವಾಗಿಲ್ಲ’ ಎಂದು ಬರೆದುಕೊಳ್ಳುವ ಮೂಲಕ ಸ್ಪಷ್ಟೀಕರಣ ನೀಡಿದ್ದಾರೆ.

Also Read  ಸುಬ್ರಹ್ಮಣ್ಯ: ಮಳೆಯ ಅಬ್ಬರಕ್ಕೆ ಪರ್ವತಮುಖಿಯಲ್ಲಿ ಮನೆಯ ಮೇಲ್ಛಾವಣಿ ಕುಸಿತ


ಕರ್ನಾಟಕ ಪ್ರೌಢ ಶಿಕ್ಷಣ ಮಂಡಳಿ ಫಲಿತಾಂಶ ಪ್ರಕಟಪಡಿಸಿದ ಬಳಿಕ ವಿದ್ಯಾರ್ಥಿಗಳು ತಮ್ಮ ಫಲತಾಂಶವನ್ನು ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ನೋಡಬಹುದಾಗಿದೆ.

error: Content is protected !!
Scroll to Top