ಕಡಬ : ಗ್ಯಾಸ್ ಸಿಲಿಂಡರ್ ಸ್ಪೋಟ, ಅಪಾರ ಪ್ರಮಾಣದ ನಷ್ಟ

(ನ್ಯೂಸ್ ಕಡಬ) newskadaba.com ಕಡಬ, ಆ.07:  ಕಡಬ ತಾಲೂಕು ಬಲ್ಯ ಗ್ರಾಮದ ಕೆರೆನಡ್ಕ ದರ್ಣಪ್ಪ‌ ಗೌಡ ಎಂಬುವವರ ಮನೆಯಲ್ಲಿ ಗುರುವಾ ರಾತ್ರಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ.

 

 

ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ರಭಸಕ್ಕೆ ಮನೆಯ ಮೇಲ್ಚಾವಣಿ ಭಾಗಷ: ಹಾನಿಗೊಂಡಿದೆ. ಮನೆಯ ಗೋಡೆ ಬಿರುಕು ಬಿಟ್ಟಿದೆ. ಕೋಣೆಯಲ್ಲಿದ್ದ ವಸ್ತುಗಳಿಗೆ ಹಾನಿಯಾಗಿದ್ದು, ಚೆಲ್ಲಾಪಿಲ್ಲಿಯಾಗಿವೆ, ಅಪಾರ ಪ್ರಮಾಣದ ನಷ್ಟ ಉಂಟಾಗಿದೆ.ಸದ್ಯ ಮನೆ ಮಂದಿ ಪ್ರಾಣಾಪಾಯದಿಂದ ಪಾರಾಗಿದ್ದರೆ. ಘಟನಾ ಸ್ಥಳಕ್ಕೆ ಗ್ರಾಮ ಪಂಚಾಯತ್ ಸಿಬ್ಬಂದಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

error: Content is protected !!

Join the Group

Join WhatsApp Group