ಬಂಟ್ವಾಳ: ಶರತ್ ಮಡಿವಾಳ ಕೊಲೆ ಆರೋಪಿಯ ಕೊಲೆಗೆ ಯತ್ನ

(ನ್ಯೂಸ್ ಕಡಬ) newskadaba.com ಕಡಬ, ಆ.07:  ದ. ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಆರೆಸ್ಸೆಸ್ ಕಾರ್ಯಕರ್ತ ಶರತ್ ಮಡಿವಾಳ ಕೊಲೆ ಪ್ರಕರಣದ ಆರೋಪಿ ಶರೀಫ್ ಎಂಬಾತನ ಮೇಲೆ ದುಷ್ಕರ್ಮಿಗಳ ತಂಡವೊಂದು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೆ ಯತ್ನಿಸಿರುವ ಘಟನೆ ಶುಕ್ರವಾರ ಮಧ್ಯಾಹ್ನ ಸಜೀಪ ಮುನ್ನೂರು ಗ್ರಾಮದ ಆಲಂಪಾಡಿಯಲ್ಲಿ ವರದಿಯಾಗಿದೆ.

 

ಆದರೆ ಆತ ಓಡಿ ದುಷ್ಕರ್ಮಿಗಳಿಂದ ತಪ್ಪಿಸಿಕೊಂಡಿದ್ದು ಸಣ್ಣ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬಂಟ್ವಾಳ ತಾಲೂಕಿನ ಸಜಿಪ ಮುನ್ನೂರು ಗ್ರಾಮದ ಆಲಂಪಾಡಿ ಶಾರದಾ ನಗರದ ನಿವಾಸಿಯಾದ ಶರೀಫ್ ಮನೆಯಿಂದ ಮಸೀದಿಗೆ ಬೈಕ್ ನಲ್ಲಿ ತೆರಳುತ್ತಿದ್ದ ವೇಳೆ ಎರಡು ಬೈಕ್, ಒಂದು ಕಾರಿನಲ್ಲಿ ಬಂದ ದುಷ್ಕರ್ಮಿಗಳ ತಂಡ ದಾಳಿ ನಡೆಸಿದೆ ಎನ್ನಲಾಗಿದೆ. ಶರೀಫ್ ತೆರಳುತ್ತಿದ್ದ ಬೈಕಿಗೆ ದುಷ್ಕರ್ಮಿಗಳು ತಾವಿದ್ದ ಬೈಕನ್ನು ಢಿಕ್ಕಿ ಹೊಡೆಸಿ ಕೆಳಗೆ ಬೀಳಿಸಿದ್ದಾರೆ. ಈ ಸಂದರ್ಭದಲ್ಲಿ ಬೈಕ್ ನಲ್ಲಿದ್ದ ಹಿಂಬದಿ ಸವಾರರು ಮತ್ತು ಕಾರಿನಲ್ಲಿದ್ದವರು ಇಳಿದು ಶರೀಫ್ ಗೆ ತಲವಾರು ಬೀಸಿದ್ದಾರೆ. ಅಪಾಯದ ಅರಿವಾದ ಶರೀಫ್ ಓಡಿ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎನ್ನಲಾಗಿದೆ. ಶರೀಫ್ ಗೆ ಬೈಕ್ ನಿಂದ ಬಿದ್ದ ಸಣ್ಣ ಪುಟ್ಟ ಗಾಯಗಳಾಗಿದ್ದು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ.

Also Read  ಉಳ್ಳಾಲ: ಪ.ಜಾತಿ/ಪ.ಪಂಗಡ ಕುಂದುಕೊರತೆ ಸಭೆ

 

error: Content is protected !!
Scroll to Top