(ನ್ಯೂಸ್ ಕಡಬ) newskadaba.com. ಚಿತ್ರದುರ್ಗ, ಸೆ.14, ಚಾಲಕನ ನಿಯಂತ್ರಣ ತಪ್ಪಿದ ಖಾಸಗಿ ಬಸ್ಸೊಂದು ನಿಂತಿದ್ದ ಲಾ ರಿಗೆ ಡಿಕ್ಕಿಯಾಗಿ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿ ಮೂವರು ಗಾಯಗೊಂಡ ಘಟನೆ ಹಿರಿಯೂರು ತಾಲೂಕಿನ ಐಮಂಗಲ ಬಳಿ ಗುರುವಾರ ಮುಂಜಾನೆ ನಡೆದಿದೆ.
ಸೂರತ್ ಮೂಲದ 30 ವರ್ಷದ ಅರುಣ್ ಹಾಗೂ ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಗಣೇಕಲ್ ಗ್ರಾಮದ ನಿವಾಸಿ 30 ವರ್ಷದ ಪ್ರಶಾಂತ ಮೃತಪಟ್ಟ ದುರ್ದೈವಿಗಳು.
ಗೋವಾದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ ಬಸ್, ಚಿತ್ರದುರ್ಗ ಜಿಲ್ಲೆ ಹಿರಿಯೂರು ತಾಲೂಕಿನ ಐಮಂಗಲ ಸಮೀಪ ರಾಷ್ಟ್ರೀಯ ಹೆದ್ದಾರಿ 4ರಲ್ಲಿ ರಸ್ತೆ ಬದಿ ನಿಂತಿದ್ದ ಸರಕು ಲಾರಿಗೆ ಮುಂಜಾನೆ ಡಿಕ್ಕಿ ಹೊಡೆದಿದೆ. ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಮೃತರ ಶವಗಳನ್ನ ಜಿಲ್ಲಾಸ್ಪತ್ರೆ ಶವಾಗಾರಕ್ಕೆ ರವಾನಿಸಲಾಗಿದೆ. ಇನ್ನು ಗಾಯಗೊಂಡ ಮೂವರು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಕುರಿತು ಐಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.