ಕಡಬ: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು ➤ ನಾಲ್ವರಿಗೆ ಗಾಯ, ಇಬ್ಬರಿಗೆ ಗಂಭೀರ

(ನ್ಯೂಸ್ ಕಡಬ) newskadaba.com ಕಡಬ, ಆ.09. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಬದಿಯ ಚರಂಡಿಗೆ ಬಿದ್ದು ಇಬ್ಬರು ಗಂಭೀರ ಗಾಯಗೊಂಡ ಘಟನೆ ಧರ್ಮಸ್ಥಳ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಮರ್ಧಾಳ ಸಮೀಪದ ಮೀನಾಡಿ ನೈಲ ಕ್ರಾಸ್ ಬಳಿ ಭಾನುವಾರದಂದು ಸಂಭವಿಸಿದೆ.

ಬೆಂಗಳೂರು ಮೂಲದ ನಾಲ್ವರು ಮಾರುತಿ ಎಸ್ಟೀಮ್ ಕಾರಿನಲ್ಲಿ ಧರ್ಮಸ್ಥಳಕ್ಕೆ ಆಗಮಿಸಿ, ದೇವರ ದರ್ಶನ ಪಡೆದು ಸುಬ್ರಹ್ಮಣ್ಯಕ್ಕೆ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮೀನಾಡಿ ಸಮೀಪದ ನೈಲ ಕ್ರಾಸ್ ಬಳಿಯ ತಿರುವಿನಲ್ಲಿ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಉರುಳಿ ಬಿದ್ದಿದೆ. ಚಾಲಕನಿಗೆ ನಿದ್ದೆ ತೂಕಡಿಸಿದ್ದೇ ಘಟನೆಗೆ ಕಾರಣ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕಡಬ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿದೆ.

Scroll to Top