ಕಡಬ: ತಾಲೂಕು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಜಾನ್ ಪ್ರಕಾಶ್ ರೋಡ್ರಿಗಸ್

(ನ್ಯೂಸ್ ಕಡಬ) newskadaba.com ಕಡಬ: ಆ.13, ತಾಲೂಕು ಪಟ್ಟಣ ಪಂಚಾಯತ್ ಆಡಳಿತಾಧಿಕಾರಿಯಾಗಿ ಕಡಬ ತಾಲೂಕು ತಹಶೀಲ್ದಾರ್ ಜಾನ್ ಪ್ರಕಾಶ್ ರೋಡ್ರಿಗಸ್ ಆಗಸ್ಟ್ 13ರಂದು ಅಧಿಕಾರ ವಹಿಸಿಕೊಂಡರು.

ಕಡಬ ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಅರುಣ್. ಕೆ ಹೂಗುಚ್ಛ ನೀಡುವ ಮೂಲಕ ಸ್ವಾಗತಿಸಿದರು. ಕಡಬ ಜಿಲ್ಲಾ ಪಂಚಾಯತ್ ಸದಸ್ಯ ಪಿ. ಪಿ ವರ್ಗೀಸ್, ಕಂದಾಯ ನಿರೀಕ್ಷಕ ಅವಿನ್ ರಂಗತ್ತಮಲೆ, ಗ್ರಾಮ ಪಂಚಾಯತ್ ಮಾಜಿ ಸದಸ್ಯ ಎ.ಯಸ್. ಷರೀಫ್, ಪಟ್ಟಣ ಪಂಚಾಯತ್ ಸಿಬ್ಬಂದಿಗಳಾದ ಹರೀಶ್ ಬೆದ್ರಾಜೆ ವಾರಿಜ, ಗುರುರಾಜ್ ಭಟ್, ರಿಯಾಝ್ ಮೊದಲಾದವರು ಉಪಸ್ಥಿತರಿದ್ದರು.

Also Read  ಪ್ರಯಾಣಿಕರ ಗಮನಕ್ಕೆ- ಬೆಂಗಳೂರು-ಮುರುಡೇಶ್ವರ ರೈಲು ವೇಳಾಪಟ್ಟಿ ಬದಲಾವಣೆ

error: Content is protected !!
Scroll to Top