ಬೈಕ್- ಟಿಪ್ಪರ್ ಲಾರಿ ನಡುವೆ ಢಿಕ್ಕಿ – ಓರ್ವ ಮೃತ್ಯು



(ನ್ಯೂಸ್ ಕಡಬ) newskadaba.com ಕಾಸರಗೋಡು, . 18. ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಾಯಗೊಂಡ ಘಟನೆ ಪೈವಳಿಕೆ ಸಮೀಪ ನಡೆದಿದೆ.





ಮೃತರನ್ನು ಕಯ್ಯಾರ್ ಮೇರ್ಕಳದ ಅಬೂಬಕ್ಕರ್ (32) ಎಂದು ಗುರುತಿಸಲಾಗಿದೆ. ಗಾಯಗೊಂಡ ಬಿ.ಸಿ ರೋಡ್ ನ ಮುಹಮ್ಮದ್ ಹನೀಫ್ ಎಂಬವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪೈವಳಿಕೆ ಸಮೀಪದ ಕಳಾಯಿ ಸೇತುವೆ ಬಳಿ ಈ ಅಪಘಾತ ನಡೆದಿದೆ. ಅತೀ ವೇಗದಿಂದ ಬಂದ ಟಿಪ್ಪರ್ ಲಾರಿಯು ಇವರು ಸಂಚರಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದಿದ್ದು, ರಸ್ತೆಗೆಸೆಯಲ್ಪಟ್ಟ ಇಬ್ಬರನ್ನು ಸಾರ್ವಜನಿಕರು ಕಾಸರಗೋಡು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಸ್ಪಂದಿಸದೆ ಅಬೂಬಕ್ಕರ್ ರಾತ್ರಿ ಮೃತಪಟ್ಟರು. ಮಂಜೇಶ್ವರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.






error: Content is protected !!
Scroll to Top