ಸುಪ್ರೀಂನಿಂದ ಮಹತ್ವದ ತೀರ್ಪು ➤ ನಟ ಸುಶಾಂತ್‌ ಸಾವಿನ ಪ್ರಕರಣ ಸಿಬಿಐಗೆ ಹಸ್ತಾಂತರ..!

(ನ್ಯೂಸ್ ಕಡಬ) newskadaba.com  ಆ,19:  ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅನುಮಾನಾಸ್ಪದ ಸಾವು ಪ್ರಕರಣದ ತನಿಖೆ ಸಿಬಿಐಗೆ ವಹಿಸುವಂತೆ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪಟ್ನಾದಲ್ಲಿ ದಾಖಲಾಗಿದ್ದ ಎಫ್ ಐ ಆರ್ ಅನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿ ನಟಿ ರಿಯಾ ಚಕ್ರವರ್ತಿ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ರಿಯಾ ಚಕ್ರವರ್ತಿ ಮತ್ತು ಮುಂಬೈ ಪೊಲೀಸರು ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿದ ಸುಪ್ರೀಂ ಕೋರ್ಟ್, ಪ್ರಕರಣವನ್ನು ಸಿಬಿಐಗೆ ವರ್ಗಾಯಿಸಿದೆ. ಬಿಹಾರ ಪೊಲೀಸರು ಸಲ್ಲಿಸಿದ್ದ ಎಫ್ ಐ ಆರ್ ಕಾನೂನು ಬದ್ಧವಾಗಿದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ಮುಂಬೈ ಪೊಲೀಸರು ತನಿಖೆಗೆ ಸಹರಿಕಬೇಕು, ತನಿಖೆಯ ದಾಖಲೆಗಳನ್ನುಸಿಬಿಐಗೆ ಹಸ್ತಾಂತರಿಸಬೇಕೆಂದು ಸುಪ್ರೀಂ ಕೊರ್ಟ್ ಆದೇಶಿಸಿದೆ.

ಸುಶಾಂತ್ ಸಾವಿನ ಪ್ರಕರಣದ ತನಿಖೆ ವಿಚಾರದಲ್ಲಿ ಮುಂಬೈ ಪೊಲೀಸರು ಮತ್ತು ಬಿಹಾರ ಪೊಲೀಸರ ನಡುವೆ ಹಗ್ಗಜಗ್ಗಾಟ ನಡೆಯುತ್ತಿತ್ತು. ಬಿಹಾರ ಪೊಲೀಸರು ಸುಪ್ರೀಂ ಕೋರ್ಟಿ ಗೆ ಸಲ್ಲಿಸಿದ ಅರ್ಜಿಯಲ್ಲಿ ಮಹಾರಾಷ್ಟ್ರ ಪೊಲೀಸರು ರಾಜಕೀಯ ಒತ್ತಡದಿಂದ ಎಫ್ ಐ ಆರ್ ದಾಖಲಿಸಿಲ್ಲ. ಬಿಹಾರ ಪೊಲೀಸರಿಗೆ ಯಾವುದೇ ಸಹಕಾರ ನೀಡುತ್ತಿಲ್ಲ ಎಂದು ಆರೋಪಿಸಿದ್ದರು. ಸುಶಾಂತ್ ಸಾವಿನ ಪ್ರಕರಣವನ್ನು ವಿವಿದ ಆಂಗಲ್ ಗಳಲ್ಲಿ ತನಿಖೆ ನಡೆಸುತ್ತಿದ್ದರು. ಇದೀಗ ಸುಶಾಂತ್ ಸಿಂಗ್ ಪ್ರಕರಣ ಸಿಬಿಐ ಅಂಗಳದಲ್ಲಿದೆ.

 

error: Content is protected !!

Join WhatsApp Group

WhatsApp Share