ಸುಬ್ರಹ್ಮಣ್ಯ : ಮೂವರು ಹೋಟೆಲ್ ಸಿಬ್ಬಂದಿಗಳಿಗೆ ಕೊವೀಡ್-19 ದೃಢ



(ನ್ಯೂಸ್ ಕಡಬ) newskadaba.com ಕಡಬ. ಆ,20:  ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನಾ ಪರೀಕ್ಷೆ ವೇಳೆ ಮೂರು ಮಂದಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಹೊಟೇಲೊಂದರ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢವಾಗಿತ್ತು.





 

 

ಬಳಿಕ ಅವರೊಂದಿಗೆ ಪ್ರಾಥಮಿಕ ಸಂಪರ್ಕ ಹೊಂದಿದ ಎಲ್ಲರನ್ನು ಕ್ವಾರಂಟೈನ್ ಗೆ ಒಳಪಡಿಸಲಾಗಿತ್ತು. ಅವರನ್ನು ಕಳೆದ ದಿನ ಕೊವೀಡ್ ಪರೀಕ್ಷೆ ಗೆ ಒಳಪಡಿಸಲಾಗಿದ್ದು ಅದರಲ್ಲಿ ಮೂವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿರುವುದಾಗಿ ವರದಿ ಬಂದಿದೆ. ಈ ಹಿನ್ನಲೆಯಲ್ಲಿ ಅವರನ್ನ ಅವರ ಮನೆಯಲ್ಲೇ ಕ್ವಾರಂಟೈನ್ ಗೆ ಒಳಪಡಿಸಲಾಗಿದೆ.






error: Content is protected !!
Scroll to Top