► ಡ್ರೈವಿಂಗ್ ಲೈಸೆನ್ಸ್ ಪಡೆಯಲು ಇನ್ನು ಆಧಾರ್ ಕಾರ್ಡ್ ಕಡ್ಡಾಯ

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.16. ವಾಹನ ಚಾಲನಾ ಪರವಾನಿಗೆ ಮತ್ತು ಆಧಾರ್ ಜೋಡಣೆಯನ್ನು ಶೀಘ್ರವೇ ಆರಂಭಿಸಲಾಗುವುದು ಎಂದು ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಸಚಿವ ರವಿಶಂಕರ ಪ್ರಸಾದ್ ಅವರು ಶುಕ್ರವಾರ ತಿಳಿಸಿದ್ದಾರೆ.

ಹರ್ಯಾಣ ಡಿಜಿಟಲ್ ಶೃಂಗ 2017ನ್ನು ಉದ್ಘಾಟಿಸಿ ಮಾತನಾಡಿದ ಅವರು, ಒಬ್ಬರೇ ಹಲವಾರು ಚಾಲನಾ ಪರವಾನಿಗೆಗಳನ್ನು ಪಡೆಯುವ ಪಿಡುಗನ್ನು ನಿವಾರಿಸಲು ಈ ಕ್ರಮವನ್ನು ಕೈಗೊಳ್ಳಲಾಗುತ್ತಿದೆ ಎಂದರು. ಈ ಸಂಬಂಧ ರಸ್ತೆ ಸಾರಿಗೆ ಮತ್ತು ಹೆದ್ದಾರಿಗಳ ಸಚಿವ ನಿತಿನ್ ಗಡ್ಕರಿ ಅವರೊಂದಿಗೆ ಮಾತನಾಡಲಾಗಿದ್ದು, ಚಾಲನಾ ಪರವಾನಿಗೆಗಳನ್ನು ಆಧಾರ್‌ನೊಂದಿಗೆ ಜೋಡಣೆಗೊಳಿಸುವ ಪ್ರಕ್ರಿಯೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಪ್ರಸಾದ್ ತಿಳಿಸಿದರು.

Scroll to Top