ಸುಳ್ಯ: ಮಹಡಿಯಿಂದ ಜಿಗಿದು ಯುವಕ ಮೃತ್ಯು



(ನ್ಯೂಸ್‌ ಕಡಬ) newskadaba.com ಸುಳ್ಯ, ಆ. ೨೦. ಇಲ್ಲಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೋರ್ವರು ನಾಲ್ಕನೇ ಮಹಡಿಯಿಂದ ಕೆಳಕ್ಕೆ ಜಿಗಿದು ಮೃತಪಟ್ಟ ಘಟನೆ ನಡೆದಿದೆ.





ಮೃತರನ್ನು ಕೊಲ್ಲಮೊಗ್ರದ ಸತ್ತಾರ್ (೩೫ ವರ್ಷ) ಎಂದು ತಿಳಿದು ಬಂದಿದೆ. ಮಾನಸಿಕ ಅಸ್ವಸ್ಥರಾಗಿದ್ದ ಇವರು, ಎರಡು ದಿನಗಳ ಹಿಂದೆ ಸುಳ್ಯದ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಇಂದು ಸಂಜೆ ೪.೩೦ರ ವೇಳೆಗೆ ಇವರು ನಾಲ್ಕನೇ ಮಹಡಿಯಿಂದ ಕೆಳಗೆ ಹಾರಿ ಮೃತಪಟ್ಟಿದ್ದಾರೆಂದು ತಿಳಿದು ಬಂದಿದೆ. ಕೆಳಕ್ಕೆ ಬಿದ್ದು ತೀವ್ರ ಗಾಯಗೊಂಡ ಈತನಿಗೆ ಚಿಕಿತ್ಸೆ ಕೊಡಿಸಲಾಯಿತಾದರೂ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ ಎನ್ನಲಾಗಿದೆ.






error: Content is protected !!
Scroll to Top