ಚೇತರಿಕೆ ಕಾಣದ ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆರೋಗ್ಯ



(ನ್ಯೂಸ್ ಕಡಬ) newskadaba.com ನವದೆಹಲಿ. ಆ,21:  ಮಾಜಿ ರಾಷ್ಟ್ರಪತಿ ಪ್ರಣವ್‌ ಮುಖರ್ಜಿ ಅವರ ಆರೋಗ್ಯದಲ್ಲಿ ಯಾವುದೇ ಸುಧಾರಣೆ ಕಂಡುಬಂದಿಲ್ಲ. ಮೊದಲಿನಂತೆ ವೆಂಟಿಲೇಟರ್‌ ವ್ಯವಸ್ಥೆ ಮುಂದುವರಿಸಲಾಗಿದೆ.





ಕೊರೊನಾ ಸೋಂಕು ಧೃಡಪಟ್ಟ ಬಳಿಕ ಅವರಲ್ಲಿ ಶ್ವಾಸಕೋಶದ ಸೋಂಕು ಕಾಣಿಸಿಕೊಂಡಿದೆ. ಈ ಸಂಬಂಧ ಚಿಕಿತ್ಸೆಯನ್ನು ನೀಡಲಾಗುತ್ತಿದೆ. ಆಗಷ್ಟ್ 10ರಂದು ದೆಹಲಿಯ ಆರ್ಮಿ ರಿಸರ್ಚ್‌ ಆಯಂಡ್‌ ರೆಫೆರಲ್ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ. ಅವರ ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ್ದ ಕಾರಣ ಶಸ್ತ್ರಚಿಕಿತ್ಸೆ ಮೂಲಕ ಅದನ್ನು ತೆಗೆಯಲಾಗಿದೆ. ಮತ್ತೇ, ತುರ್ತು ಚಿಕಿತ್ಸಾ ವಿಭಾಗದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.






 

error: Content is protected !!
Scroll to Top