ಆ. 27ರವರೆಗೂ ಕರಾವಳಿಯಲ್ಲಿ ಭಾರಿ ಮಳೆ ಸಾಧ್ಯತೆ..!

(ನ್ಯೂಸ್ ಕಡಬ) newskadaba.com ಕರಾವಳಿ. ಆ,23:  ರಾಜ್ಯದ ಮೂರು ಜಿಲ್ಲೆಗಳಲ್ಲಿ ಆಗಸ್ಟ್ 27ರವರೆಗೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಸೇರಿದಂತೆ ಕರಾವಳಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಈ ಮೂರು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಉತ್ತರ ಮತ್ತು ದಕ್ಷಿಣ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ.

 

 

ಬೆಂಗಳೂರಿನಲ್ಲಿ ಗರಿಷ್ಠ 29 ಡಿಗ್ರಿ ಸೆಲ್ಸಿಯಸ್, ಕನಿಷ್ಠ 21 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕೊಡಗು, ನಾಪೊಕ್ಲು ಹಾಗೂ ಭಾಗಮಂಡಲದಲ್ಲಿ ಶುಕ್ರವಾರ ಭಾರೀ ಮಳೆಯಾಗಿದ್ದು, ಬಳಿಕ ಸಾಧಾರಣ ಮಳೆ ಸುರಿದಿದೆ.ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಮಳೆ ಪ್ರಮಾಣ ಕಡಿಮೆಯಾಗಿದ್ದು, ಹಲವೆಡೆ ಸಾಧಾರಣ ಮಳೆಯಾಗಿದೆ. ಆಗುಂಬೆ, ತೀರ್ಥಹಳ್ಳಿ ಭಾಗದಲ್ಲಿ ಮಳೆ ಕಡಿಮೆಯಾಗಿರುವ ಕಾರಣ ತುಂಗಾ ಜಲಾಶಯದ ನೀರಿನ ಮಟ್ಟ ತಗ್ಗಿದೆ.

Also Read  ವಿವಿ ತುಳು ಎಂಎ ಅಧ್ಯಯನ ಪ್ರವೇಶ ಶುಲ್ಕ ಕಡಿತಕ್ಕೆ ಸಂಸದ ಚೌಟ ಮನವಿ - ಪ್ರವೇಶ ಶುಲ್ಕದಲ್ಲಿ ರಿಯಾಯಿತಿ ನೀಡುವಂತೆ ಶಿಕ್ಷಣ ಸಚಿವರಿಗೆ ಪತ್ರ

 

 

error: Content is protected !!
Scroll to Top