ಕಲ್ಲುಗುಡ್ಡೆ: ತೀವ್ರ ವಿರೋಧದ ನಡುವೆಯೂ ಆರಂಭಗೊಂಡ ವೈನ್ ಶಾಪ್ ► ಮದ್ಯದಂಗಡಿ ಮುಚ್ಚುವಂತೆ ಆಗ್ರಹಿಸಿ ನಾಳೆಯಿಂದ ಅನಿರ್ದಿಷ್ಟಾವಧಿ ಮುಷ್ಕರ

(ನ್ಯೂಸ್ ಕಡಬ) newskadaba.com ಕಡಬ, ಸೆ.16. ನೂಜಿಬಾಳ್ತಿಲ ಗ್ರಾಮದ ಕಲ್ಲುಗುಡ್ಡೆ ಪೇಟೆಯಲ್ಲಿ ಸರಕಾರಿ ಜಮೀನಿನಲ್ಲಿರುವ ಕಟ್ಟಡದಲ್ಲಿ ಗ್ರಾಮಸ್ಥರ ಪ್ರಬಲ ವಿರೋಧದ ನಡುವೆಯೂ ಕಳೆದ ಸೋಮವಾರದಂದು ಪ್ರಾರಂಭಗೊಂಡ ಮದ್ಯದಂಗಡಿಯನ್ನು ತೆರವುಗೊಳಿಸಬೇಕೆಂದು ಆಗ್ರಹಿಸಿ ಸೆಪ್ಟೆಂಬರ್ 17 ಭಾನುವಾರದಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಯಲಿದೆ.

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ದಲಿತ ಸಂಘಟನೆ, ನೂಜಿಬಾಳ್ತಿಲ ಗ್ರಾಮ ಪಂಚಾಯತ್ ಹಾಗೂ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳ ಉಪಸ್ಥಿತಿಯಲ್ಲಿ ಶನಿವಾರ ಸಂಜೆ ನಡೆದ ಸಭೆಯಲ್ಲಿ ಗ್ರಾಮಸ್ಥರ ತೀವ್ರ ವಿರೋಧವನ್ನು ಗ್ರಾಮಸಭೆಯಲ್ಲಿ ನಿರ್ಣಯಿಸಿ ಕಳುಹಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಅಲ್ಲದೆ ಮದ್ಯದಂಗಡಿಯನ್ನು ಸರಕಾರಿ ಜಾಗದಲ್ಲಿರುವ ಅಕ್ರಮ ಕಟ್ಟಡದಲ್ಲಿ ತೆರೆಯಲಾಗಿದ್ದು, ಈ ಬಗ್ಗೆ ಜಿಲ್ಲಾಧಿಕಾರಿ, ಅಬಕಾರಿ‌ ಇಲಾಖಾಧಿಕಾರಿಗಳಿಗೆ ಮನವಿ ನೀಡಲಾಗಿದ್ದರೂ ರಾಜಾರೋಷವಾಗಿ ಕಾರ್ಯಾಚರಿಸುತ್ತಿದೆ. ಈ ಹಿನ್ನೆಲೆಯಲ್ಲಿ ಮದ್ಯದಂಗಡಿಯನ್ನು ಮುಚ್ಚುವ ತನಕ ಭಾನುವಾರ ಬೆಳಗ್ಗಿನಿಂದ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲು ಒಮ್ಮತದಿಂದ ತೀರ್ಮಾನಿಸಲಾಗಿದ್ದು, ಕಡಬ ತಹಶೀಲ್ದಾರ್ ಹಾಗೂ ಕಡಬ ಠಾಣಾ ಉಪನಿರೀಕ್ಷಕರಿಗೆ ಮನವಿ ಸಲ್ಲಿಸಲಾಯಿತು.

error: Content is protected !!
Scroll to Top