ನಾಳೆಯಿಂದ ಪುನರಾರಂಭಗೊಳ್ಳಲಿದೆ ಕೆ.ಆರ್.ಮಾರುಕಟ್ಟೆ ➤ ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸುವಂತೆ ಸೂಚನೆ



(ನ್ಯೂಸ್ ಕಡಬ) newskadaba.com ಬೆಂಗಳೂರು, ಆ. 31. ಕೊರೊನಾ ವೈರಸ್ ಹಿನ್ನೆಲೆಯಿಂದಾಗಿ ಬಂದ್ ಆಗಿದ್ದ ಕೆ.ಆರ್. ಮಾರುಕಟ್ಟೆ ನಾಳೆಯಿಂದ ಪುನರಾರಂಭಗೊಳ್ಳಲಿದೆ.





ಕೊರೊನಾದಿಂದಾಗಿ ನಾಲ್ಕೂವರೆ ತಿಂಗಳುಗಳ  ಬಳಿಕ ಕೆ.ಆರ್. ಮಾರ್ಕೆಟ್ ಪುನಾರಂಭಗೊಳ್ಳಲಿದ್ದು, ಮಾರುಕಟ್ಟೆಯ ವ್ಯಾಪ್ತಿಯ ಹಲವು ಭಾಗಗಳಲ್ಲಿ ಸ್ಯಾನಿಟೈಸ್ ಮಾಡಲಾಗಿದೆ. ಇನ್ನು ಮಾರುಕಟ್ಟೆಗೆ ಆಗಮಿಸುವ ಗ್ರಾಹಕರು ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಅನುಕೂಲವಾಗುವಂತೆ ಬಾಕ್ಸ್ ಗಳನ್ನು ನಿರ್ಮಿಸಲಾಗಿದೆ. ಸಾಮಾಜಿಕ ಅಂತರ ಹಾಗೂ ಮಾಸ್ಕ್ ಧರಿಸದವರ ಮೇಲೆ ನಿಗಾ ಇಡಲು ಮಾರ್ಷಲ್ ಗಳ ನೇಮಕ ಮಾಡಲು ಬಿಬಿಎಂಪಿ ನಿರ್ಧರಿಸಿದೆ ಎನ್ನಲಾಗಿದೆ.






error: Content is protected !!
Scroll to Top