(ನ್ಯೂಸ್ ಕಡಬ) newskadaba.com ರಾಯಚೂರು, ಸೆ. 02. ದೇಶದ ಹಿತ ಕಾಯುವ ಶಿಕ್ಷಕರೇ ತಪ್ಪು ಮಾಡಿದರೆ ಹೇಗೆ..? ಹೀಗೆ ಮಾಡಿದಲ್ಲಿ ಮಕ್ಕಳು ಅದನ್ನೇ ಕಲಿಯುತ್ತಾರೆ. ಹೌದು, ರಾಯಚೂರಿನ ಅಂದ್ರೂನ್ ಕಿಲ್ಲಾದ ಶಾಲೆಯ ಶಿಕ್ಷಕಿ ಖಮರುನ್ನೀಸಾ ಬೇಗಂ ತಾವು ಮಾಡಿದ ಪ್ರಧಾನಿ ಹಾಗೂ ರಕ್ಷಣಾ ವ್ಯವಸ್ಥೆಯ ಬಗ್ಗೆ ಜೊತೆಗೆ ದೇಶದ ಶಾಂತಿಗೆ ಭಂಗ ತರುವಂತಹ ಪೋಸ್ಟ್ ಸಂಬಂಧದಿಂದ ಇದೀಗ ತಮ್ಮ ಕೆಲಸವನ್ನೇ ಕಳೆದುಕೊಂಡಿದ್ದಾರೆ.
ಶಾಲಾ ಶಿಕ್ಷಕರ ವಾಟ್ಸಾಪ್ ಗ್ರೂಪ್‌ನಲ್ಲಿ ಉರ್ದು ಭಾಷೆಯಲ್ಲಿ ದೇಶದ ಶಾಂತಿಗೆ ಧಕ್ಕೆ ತರುವ ಪೋಸ್ಟ್ ಗಳನ್ನು ಹಾಕಿದ್ದರಿಂದ ಇವರನ್ನು ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಎಚ್.ಗೋನಾಳ ಅಮಾನತು ಮಾಡಿದ್ದಾರೆ.