ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ➤ ಓರ್ವನ ವಿರುದ್ದ ದೂರು

(ನ್ಯೂಸ್ ಕಡಬ) newskadaba.com  ಮಂಗಳೂರು, ಸೆ. 03. ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರವೆಸಗಿದ್ದ ದಕ್ಷಿಣ ಕನ್ನಡ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಓರ್ವ ಪೋಲಿಸ್ ವಿರುದ್ಧ ಬೆಂಗಳೂರಿನ ಯುವತಿ ದೂರು ನೀಡಿದ್ದಾರೆ.

ವಿಜಯಪುರ ಜಿಲ್ಲೆ ಬಸವನ ಬಾಗೇವಾಡಿ ನಿವಾಸಿಯಾಗಿರುವ ಪೊಲೀಸ್ ವಿರುದ್ಧ ಅತ್ಯಾಚಾರ ಎಸಗಿರುವ ಘಟನೆ ಬೆಳಕಿಗೆ ಬಂದಿದೆ. ಮದುವೆ ಮಾತುಕತೆಗಾಗಿ ಮೇ 20ರಂದು ಬೆಂಗಳೂರಿಗೆ ಬಂದಿದ್ದ ಆರೋಪಿ ಅಲ್ಲೇ ಉಳಿದುಕೊಂಡು ಅತ್ಯಾಚಾರವೆಸಗಿದ್ದಾನೆ. ಜೂನ್ 12 ರಂದು ಮಂಗಳೂರಿನ ವಸತಿಗೃಹಕ್ಕೆ ಕರೆಸಿ, ಅತ್ಯಾಚಾರವೆಸಗಿ ಮದುವೆಯಾಗಲು ನಿರಾಕರಿಸಿದ್ದಾನೆ ಎಂದು ಆರೋಪಿಸಲಾಗಿದೆ.

error: Content is protected !!

Join the Group

Join WhatsApp Group