ಅಲ್ಪಸಂಖ್ಯಾತ ವಿದ್ಯಾರ್ಥಿಗಳಿಗೆ ಅರಿವು ಸಾಲ ಯೋಜನೆ ➤ ಅರ್ಜಿ ಆಹ್ವಾನ

(ನ್ಯೂಸ್ ಕಡಬ) newskadaba.com ಮಂಗಳೂರು, ಸೆ. 03. ಕರ್ನಾಟಕ ಅಲ್ಪಸಂಖ್ಯಾತರ ಅಭಿವೃಧ್ಧಿ ನಿಗಮ (ನಿ) ಇದರ ವತಿಯಿಂದ ಮುಸ್ಲಿಂ, ಕ್ರಿಶ್ಚಿಯನ್, ಜೈನ್ಸ್, ಸಿಖ್ಖ್, ಆಂಗ್ಲೋ ಇಂಡಿಯನ್ ಹಾಗೂ ಪಾರ್ಸಿ ಜನಾಂಗದ ಅಲ್ಪಸಂಖ್ಯಾತ ವಿದ್ಯಾರ್ಥಿಗಳು 2020-21 ನೇ ಸಾಲಿನ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸಿ.ಇ.ಟಿ./ನೀಟ್‍ನಲ್ಲಿ ಆಯ್ಕೆಯಾಗುವ ವಿದ್ಯಾರ್ಥಿಗಳಿಗೆ ನಿಗಮದ ಅರಿವು ಸಾಲ ಯೋಜನೆಯಡಿ ಸಾಲ ಪಡೆಯಲು ಆನ್‍ಲೈನ್ kmdc.kar.nic.in/arivu2 ಮುಖಾಂತರ ಅರ್ಜಿ ಸಲ್ಲಿಸಬಹುದು.

 

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 18 ಕೊನೆಯ ದಿನ. ಆನ್‍ಲೈನ್ ಮೂಲಕ ಸಲ್ಲಿಸಿದ ಅರ್ಜಿಯ ಪ್ರಿಂಟ್‍ ಔಟನ್ನು ತೆಗೆದು ಕ್ಯೂ ಆರ್ ಕೋಡಿನೊಂದಿಗೆ ದಾಖಲಾತಿಗಳೊಂದಿಗೆ ನೇರವಾಗಿ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಅರ್ಜಿಯೊಂದಿಗೆ ಸಲ್ಲಿಸಬೇಕಾದ ದಾಖಲೆಗಳ ವಿವರ ಇಂತಿವೆ: ಆನ್‍ ಲೈನ್‍ ನಲ್ಲಿ ಸಲ್ಲಿಸಿದ ಅರ್ಜಿ ಕ್ಯೂ ಆರ್ ಕೋಡಿನೊಂದಿಗೆ, ಪ್ರಸ್ತುತ ವರ್ಷದ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ರೂ 6 ಲಕ್ಷ ಮಿತಿಯಲ್ಲಿರಬೇಕು, ಆಧಾರ್ ಕಾರ್ಡ್ ಮತ್ತು ರೇಶನ್ ಕಾರ್ಡ್ ಜೆರಾಕ್ಸ್ ಪ್ರತಿ, ಸಿ.ಇ.ಟಿ, ನೀಟ್ ಪರೀಕ್ಷೆ ಪ್ರವೇಶ ಪತ್ರ, ಎಸ್.ಎಸ್.ಎಲ್.ಸಿ. ಮತ್ತು ಪಿ.ಯು.ಸಿ. ಅಂಕ ಪಟ್ಟಿಯ ದೃಢೀಕೃತ ಪ್ರತಿ, 50 ರೂಪಾಯಿಯ ಇ-ಸ್ಟ್ಯಾಂಪ್‍ನೊಂದಿಗೆ ಇಂಡಿಮ್ನಿಟಿ ಬಾಂಡ್, ವಿದ್ಯಾರ್ಥಿ ಮತ್ತು ಪೋಷಕರ ಭಾವಚಿತ್ರ 2. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ (ನಿ) ಮೌಲಾನಾ ಅಜಾದ್ ಭವನ, 2 ನೆ ಮಹಡಿ, ಓಲ್ಡ್ ಕೆಂಟ್ ರಸ್ತೆ, ಪಾಂಡೇಶ್ವರ, ಮಂಗಳೂರು, ದೂರವಾಣಿ ಸಂಖ್ಯೆ 0824-2951644 ನ್ನು ಸಂಪರ್ಕಿಸಲು ನಿಗಮದ ಜಿಲ್ಲಾ ವ್ಯವಸ್ಥಾಪಕರ ಪ್ರಕಟಣೆ ತಿಳಿಸಿದೆ.

error: Content is protected !!

Join the Group

Join WhatsApp Group