ಸೆ.6 ರಿಂದ ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 05: ಕರ್ನಾಟಕದ ದಕ್ಷಿಣ ಒಳನಾಡಿನ 11 ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.‌

 

 

 

11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರಿ ಮಳೆಯನ್ನು ನಿರೀಕ್ಷಿಸಲಾಗುತ್ತಿದೆ. ಸೆಪ್ಟೆಂಬರ್ 7 ರಂದು ಚಿಕ್ಕಮಗಳೂರು, ಕೊಡಗು, ಶಿವಮೊಗ್ಗದಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಸೆ.6 ರಂದು ಹೆಚ್ಚು ಮಳೆಯಾಗುವ ನಿರೀಕ್ಷೆ ಇದೆ.

 

 

 

error: Content is protected !!

Join the Group

Join WhatsApp Group