ಅತಿವೃಷ್ಟಿ/ಪ್ರವಾಹ ಪೀಡಿತ ಪ್ರದೇಶವಾಗಿ ಕಡಬ ಸೇರಿದಂತೆ ಜಿಲ್ಲೆಯ 6 ತಾಲೂಕುಗಳ ಘೋಷಣೆ

(ನ್ಯೂಸ್ ಕಡಬ) newskadaba.com ಪುತ್ತೂರು ,ಸೆ.11: 2020 ನೇ ಸಾಲಿನ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ 23 ಜಿಲ್ಲೆಯಲ್ಲಿ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ಘೋಷಣೆ ಮಾಡಿದ್ದು, ಈ ಪೈಕಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಸೇರಿದಂತೆ 6 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳನ್ನಾಗಿ ರಾಜ್ಯಪಾಲರ ಆದೇಶಾನುಸಾರ ವಿಪತ್ತು ನಿರ್ವಹಣೆ ವಿಭಾಗದ ಕಂದಾಯ ಇಲಾಖೆ ಸರಕಾರದ ಜಂಟಿಕಾರ್ಯದರ್ಶಿ ಅವರು ಘೋಷಣಾ ಆದೇಶವನ್ನು ಹೊರಡಿಸಿದ್ದಾರೆ.

 

 

2020 ರ ಮುಂಗಾರು ಋತುವಿನ ಆಗಸ್ಟ್‌ ಮಾಹೆಯಲ್ಲಿ ರಾಜ್ಯದ ಕರಾವಳಿ ಮತ್ತು ,ಮಲೆನಾಡಿನ ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿರುವುದರಿಂದ ಮತ್ತು ಅಪಾರ ಪ್ರಮಾಣದಲ್ಲಿ ಜೀವಹಾನಿ , ಮಳೆ ಹಾನಿ, ಬೆಳೆ ಹಾನಿ ಮತ್ತು ಸಾರ್ವಜನಿಕ ಮೂಲಭೂತ ಸೌಕರ್ಯಗಳು ಹಾನಿಯಾಗಿರುತ್ತದೆ. ರಾಜ್ಯ ಸರಕಾರವು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ವರದಿಯನ್ನು ಆಧರಿಸಿ ಆಗಸ್ಟ್‌ 2020 ರ ಮಾಹೆಯಲ್ಲಿ ಅತಿವೃಷ್ಟಿ/ಪ್ರವಾಹ ಎದುರಿಸಿದ 23 ಜಿಲ್ಲೆಗಳ 120 ತಾಲೂಕುಗಳನ್ನು ಅತಿವೃಷ್ಟಿ/ಪ್ರವಾಹ ತಾಲೂಕುಗಳು ಎಂದು ಘೋಷಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ, ಬೆಳ್ತಂಗಡಿ, ಕಡಬ, ಮಂಗಳೂರು, ಮೂಡಬಿದಿರೆ, ಪುತ್ತೂರನ್ನು ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳೆಂದು ಘೋಷಿಸಲಾಗಿದೆ. ಅತಿವೃಷ್ಟಿ/ಪ್ರವಾಹ ಪೀಡಿತ ತಾಲೂಕುಗಳು ಎಂದು ಘೋಷಿಸಿದ ತಾಲೂಕುಗಳಲ್ಲಿ ಎಸ್‌ಡಿಆರ್‌ಎಫ್‌ / ಎನ್‌ಡಿಆರ್‌ಎಫ್‌ ಮಾರ್ಗಸೂಚಿ ಪ್ರಕಾರ ಹಾಗೂ ಪರಿಹಾರ ಕಾರ್ಯಗಳಿಗೆ ಸರಕಾರದಿಂದ ಕಾಲ ಕಾಲಕ್ಕೆ ಹೊರಡಿಸಲಾದ ಸರಕಾರದ ಆದೇಶ / ಸುತ್ತೋಲೆಗಳಲ್ಲಿನ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಿ, ಜಿಲ್ಲಾಡಳಿತವು ಅಗತ್ಯ ಪರಿಹಾರ ಕಾರ್ಯಗಳನ್ನು ಕೈಗೊಳ್ಳಲು ಸರಕಾರವು ಆದೇಶಿಸಿದೆ.

Also Read  ತಂಪಾದ ಖಾದ್ಯ ವೈವಿಧ್ಯ

 

 

error: Content is protected !!
Scroll to Top