ಡಿವೈಡರ್ ಏರಿ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಕಾರು ➤ ಯುವತಿ ಮೃತ್ಯು | ಮೂವರು ಗಂಭೀರ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.11. ಚಾಲಕನ ನಿಯಂತ್ರಣ ತಪ್ಪಿದ ಸ್ವಿಫ್ಟ್ ಕಾರೊಂದು ರಸ್ತೆ ವಿಭಜಕದ ಮೇಲಿನ ವಿದ್ಯುತ್ ಕಂಬಕ್ಕೆ ಅಪ್ಪಳಿಸಿದ ಪರಿಣಾಮ ಯುವತಿ ಮೃತಪಟ್ಟು, ನಾಲ್ವರು ಗಂಭೀರ ಗಾಯಗೊಂಡ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಕಾಪು ಎಂಬಲ್ಲಿ ಶುಕ್ರವಾರದಂದು ನಡೆದಿದೆ.

ಮೃತ ದುರ್ದೈವಿಯನ್ನು ಮಂಗಳೂರಿನ ಆಶ್ರಿತಾ ಸಲ್ಡಾನಾ(24) ಎಂದು ಗುರುತಿಸಲಾಗಿದೆ. ಮಂಗಳೂರಿನಿಂದ ಉಡುಪಿ ಕಡೆಗೆ ತೆರಳುತ್ತಿದ್ದ ಸ್ವಿಫ್ಟ್ ಕಾರು ಕಾಪುವಿನ ಹಳೆಯ ಮೆಸ್ಕಾಂ ಕಚೇರಿಯ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿಯ ಡಿವೈಡರ್‌ನ ಮೇಲಿನ ವಿದ್ಯುತ್‌ ಕಂಬಕ್ಕೆ ಅಪ್ಪಳಿಸಿದೆ. ಅಪಘಾತದ ತೀವ್ರತೆಗೆ ವಿದ್ಯುತ್‌ ಕಂಬ ನೆಲಕ್ಕುರುಳಿದ್ದು, ಕಾರು ಸಂಪೂರ್ಣ ನಜ್ಜು ಗುಜ್ಜಾಗಿದೆ. ಕಾರು ಚಾಲಕನ ಸ್ಥಿತಿ ಚಿಂತಾಜನಕವಾಗಿದ್ದು, ಕಾರಿನಲ್ಲಿದ್ದ ಉಳಿದವರು ಗಂಭೀರ ಗಾಯಗೊಂಡಿದ್ದಾರೆ. ಸ್ಥಳಕ್ಕೆ ಕಾಪು ಪೊಲೀಸರು ಭೇಟಿ ನೀಡಿದ್ದಾರೆ.

Also Read  ಕೋವಿನ್ ಪೋರ್ಟಲ್ ನಿಂದ ಮಾಹಿತಿ ಸೋರಿಕೆ ಆರೋಪ ➤ ಇಬ್ಬರ ಬಂಧನ

error: Content is protected !!