ಅಮಿತ್ ಶಾ ಮತ್ತೆ ಆಸ್ಪತ್ರೆಗೆ ದಾಖಲು..!!

(ನ್ಯೂಸ್ ಕಡಬ) newskadaba.com ನವದೆಹಲಿ, ಸೆ.13:  ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಶನಿವಾರ ರಾತ್ರಿ 11 ಗಂಟೆ ಸುಮಾರಿಗೆ ಮತ್ತೆ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಆಗಸ್ಟ್ 31 ರಂದು ಕೊರೊನಾ ವೈರಸ್ ನಿಂದ ಗುಣಮುಖರಾಗಿ ಡಿಸ್ಚಾರ್ಜ್ ಆಗಿದ್ದರು.

 

 

ಆದರೆ ಅಮಿತ್ ಷಾ ಅವರಲ್ಲಿ ಮತ್ತೆ ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ. ಉಸಿರಾಟದ ಸಮಸ್ಯೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಯಲ್ಲೇ ಉಳಿದರೆ ನಿರಂತರ ಚಿಕಿತ್ಸೆಗೆ ಸಹಾಯವಾಗಲಿದೆ ಎಂಬ ಉದ್ದೇಶದಿಂದ ಮತ್ತೊಮ್ಮೆ ಅಮಿತ್ ಶಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

 

 

Scroll to Top