ಪ್ರಧಾನಿ ಮೋದಿಯವರ 70ನೇ ಜನ್ಮದಿನ ➤ ಉಡುಪಿ ಜಿ. ಮಹಿಳಾ ಮೋರ್ಚಾದಿಂದ ಉಚಿತ ಕಣ್ಣಿನ ತಪಾಸಣೆ

(ನ್ಯೂಸ್ ಕಡಬ) newskadaba.com ಉಡುಪಿ, ಸೆ.13:  ಪ್ರಧಾನಿ ನರೇಂದ್ರ ಮೋದಿಯವರ 70ನೇ ಜನ್ಮದಿನಾಚರಣೆಯ ಅಂಗವಾಗಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ವತಿಯಿಂದ ಸೆಪ್ಟೆಂಬರ್ 19 ನೇ ಶನಿವಾರ ಉಚಿತ ಕಣ್ಣಿನ ತಪಾಸಣೆ ನಡೆಯಲಿದೆ.

ಸಪ್ಟೆಂಬರ್ 19 ರಂದು ಮೋದಿಯವರ ಜನ್ಮದಿನಾಚರಣೆಯ ದಿನದಂದು ಬೆಳಿಗ್ಗೆ 9 ಗಂಟೆಗೆ ಜಿಲ್ಲಾ ಬಿಜೆಪಿ ಕಚೇರಿ ಕಡಿಯಾಳಿಯಲ್ಲಿ ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಮತ್ತು ಅಗತ್ಯವಿದ್ದಲ್ಲಿ ಉಚಿತ ಕಣ್ಣಿನ ಶಸ್ತ್ರಚಿಕಿತ್ಸೆಯನ್ನು ಜಿಲ್ಲಾ ಮಹಿಳಾ ಮೋರ್ಚಾ ಮತ್ತು ಪ್ರಸಾದ್ ನೇತ್ರಾಲಯ ಇವರ ಜಂಟಿ ಸಹಭಾಗತ್ವದಲ್ಲಿ ನಡೆಸಲಾಗುವುದು. ಇದರ ಸದುಪಯೋಗವನ್ನು ಪಡೆಯುವವರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸ ಬೇಕೆಂದು ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷರಾದ ವೀಣಾ. ಎಸ್. ಶೆಟ್ಟಿಯವರು ವಿನಂತಿಸಿದ್ದಾರೆ.

Also Read  ಅಭಿವೃದ್ಧಿ ಹೊಂದಿದ ರಾಷ್ಟ್ರ ಮಾಡಲು ಭಾರತದ ಏಕತೆ ಮುಖ್ಯವಾಗಿದೆ: ಪ್ರಧಾನಿ ಮೋದಿ

 

error: Content is protected !!
Scroll to Top