ಶ್ರೀ ಕ್ಷೇತ್ರ ಪಣೋಲಿಬೈಲು ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ರಶ್ಮಿ ಎಸ್. ಆರ್ ನೇಮಕ



(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ.15: ತುಳುನಾಡಿನ ಪ್ರಸಿದ್ಧ ಐತಿಹಾಸಿಕ ಹಿನ್ನೆಲೆಯುಳ್ಳ ಕಾರಣಿಕದ ಶ್ರೀ ಕ್ಷೇತ್ರ ಪಣೋಲಿಬೈಲು ಕಲ್ಲುರ್ಟಿ ದೇವಸ್ಥಾನದ ಆಡಳಿತ ಅಧಿಕಾರಿಯಾಗಿ ಬಂಟ್ವಾಳ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ನೇಮಕ ಮಾಡಲಾಗಿದೆ.





 

 

ಬಂಟ್ವಾಳ ವ್ಯಾಪ್ತಿಯಲ್ಲಿ ಪ್ರಾಮಾಣಿಕ ಅಧಿಕಾರಿ ಎಂದೇ ಹೆಸರು ಪಡೆದಿದ್ದ ರಶ್ಮಿ ಎಸ್. ಆರ್ ರವರ ಸಾಧನೆ ಅಮೋಘ.  ಜನರ ಮೆಚ್ಚುಗೆಗೆ ಪಾತ್ರವಾಗಿರುವ ತಹಶೀಲ್ದಾರ್ ರಶ್ಮಿ ಎಸ್. ಆರ್ ಅವರನ್ನು ಧಾರ್ಮಿಕ ದತ್ತಿ ಇಲಾಖೆ ನೇಮಕ ಮಾಡಿ ಆದೇಶ ನೀಡಿದೆ. ಕಳೆದ ಒಂದುವರೆ ವರ್ಷಗಳಿಂದ ಬಂಟ್ವಾಳ ತಾಲೂಕಿನ ತಹಶಿಲ್ದಾರ್ ಆಗಿದ್ದು ಕೊಂಡು ಜನರ ಸಮಸ್ಯೆಗಳಿಗೆ ತಕ್ಷಣ ಸ್ಪಂಧಿಸಿ ದಕ್ಷ ಅಧಿಕಾರಿ ಎಂಬ ಹೆಗ್ಗಳಿಕೆಗೆ ರಶ್ಮಿ ಎಸ್. ಆರ್  ರವರು ಪಾತ್ರರಾಗಿದ್ದಾರೆ.






 

 

 

error: Content is protected !!
Scroll to Top