ಪುತ್ತೂರು: ಮಾನಸಿಕ ಅಸ್ವಸ್ಥನಿಗೆ ಕಾರು ಢಿಕ್ಕಿ

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 15. ಮಾನಸಿಕ ಅಸ್ವಸ್ಥರೋರ್ವರಿಗೆ ಅಪರಿಚಿತ ವಾಹನವೊಂದು ಢಿಕ್ಕಿ ಹೊಡೆದು ಪರಾರಿಯಾದ ಘಟನೆ ನರಿಮೊಗರು ಎಂಬಲ್ಲಿ ನಡೆದಿದೆ.

ಪುತ್ತೂರು ಕಡೆಯಿಂದ ಕಾಣಿಯೂರು ಕಡೆಗೆ ತೆರಳುತ್ತಿದ್ದ ಕಾರೊಂದು ನರಿಮೊಗರು ಸಮೀಪ ರಸ್ತೆ ಬದಿಯಲ್ಲಿ ನಡೆಯುತ್ತಿದ್ದ ಮಾನಸಿಕ ಅಸ್ವಸ್ಥರೋರ್ವರಿಗೆ ಢಿಕ್ಕಿ ಹೊಡೆದಿದ್ದು, ಈ ರಭಸಕ್ಕೆ ರಸ್ತೆಗೆಸೆಯಲ್ಪಟ್ಟು ಇವರ ತಲೆಗೆ ಹಾಗೂ ದೇಹದ ಇತರ ಭಾಗಗಳಿಗೆ ಗಾಯಗಳಾಗಿವೆ ಎನ್ನಲಾಗಿದೆ. ಈ ವ್ಯಕ್ತಿಯು ಹಲವಾರು ವರ್ಷಗಳಿಂದ ನರಿಮೊಗರು ಭಾಗದಲ್ಲಿ ತಿರುಗಾಡುತ್ತಿದ್ದು, ಯಾರಿಗೂ ತೊಂದರೆ ನೀಡದೇ ತನ್ನ ಪಾಡಿಗೆ ತಾನಿದ್ದು, ರಾತ್ರಿ ವೇಳೆ ಬಸ್ ಸ್ಟ್ಯಾಂಡ್ ನಲ್ಲಿ ಮಲಗುತ್ತಿದ್ದರು. ಇಂತಹ ಅಪರಿಚಿತ ವ್ಯಕ್ತಿಗೆ ಢಿಕ್ಕಿ ಹೊಡೆದು ಪರಾರಿಯಾದ ಕಾರು ಚಾಲಕನ ವಿರುದ್ದ ಸ್ಥಳೀಯರು ಅಕ್ರೋಶ ವ್ಯಕ್ತಪಡಿಸಿದ್ದು ಅಲ್ಲದೇ ಕಾರನ್ನು ವಶಕ್ಕೆ ಪಡೆದು ಗಾಯಾಳುವಿಗೆ ಪರಿಹಾರ ಕೊಡಬೇಕು ಎಂದು ಆಗ್ರಹಿಸಿದ್ದಾರೆ.

Also Read  ಮೂವರು ಬೈಕ್ ಕಳ್ಳರ ಬಂಧನ; ಬೈಕ್‌ಗಳು ಪೊಲೀಸ್ ವಶಕ್ಕೆ

error: Content is protected !!
Scroll to Top