ಕಡಬ: ಬೈಕ್ – ಕಾರು ನಡುವೆ ಢಿಕ್ಕಿ ➤ ಬೈಕ್ ಸವಾರನಿಗೆ ಗಾಯ



(ನ್ಯೂಸ್ ಕಡಬ) newskadaba.com ಕಡಬ, ಸೆ.15. ಕಾರು ಹಾಗೂ ಬೈಕ್‌ ನಡುವೆ ಢಿಕ್ಕಿ ಸಂಭವಿಸಿದ ಪರಿಣಾಮ ಬೈಕ್ ಸವಾರ ಗಾಯಗೊಂಡ ಘಟನೆ ಉಪ್ಪಿನಂಗಡಿ – ಸುಬ್ರಹ್ಮಣ್ಯ ರಾಜ್ಯ ಹೆದ್ದಾರಿಯ ಕುಂತೂರು ಎಂಬಲ್ಲಿ ಮಂಗಳವಾರದಂದು ನಡೆದಿದೆ.





ಗಾಯಾಳು ಬೈಕ್ ಸವಾರನನ್ನು ಕಡಬ ತಾಲೂಕಿನ ಬಂಟ್ರ ಗ್ರಾಮದ ನೀರಾಜೆ ಬಸವಪಾಲ್ ನಿವಾಸಿ ರಾಜೇಶ್ ಎಂದು ಗುರುತಿಸಲಾಗಿದೆ. ಕಡಬದಿಂದ ಆಲಂಕಾರು ಕಡೆಗೆ ತೆರಳುತ್ತಿದ್ದ ಬೈಕ್ ಹಾಗೂ ವಿರುದ್ಧ ದಿಕ್ಕಿನಿಂದ ಆಗಮಿಸುತ್ತಿದ್ದ ಕಾರು ನಡುವೆ ಕುಂತೂರು ಸಮೀಪದ ಬುಡೇರಿಯಾ ತಿರುವಿನಲ್ಲಿ ಢಿಕ್ಕಿ ಸಂಭವಿಸಿದೆ. ಗಾಯಾಳು ಸವಾರನನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಕಡಬ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.






error: Content is protected !!
Scroll to Top