ಬೈಂದೂರು: ಕಾಲು ಜಾರಿ ಹೊಳೆಗೆ ಬಿದ್ದು ಯುವಕ ಮೃತ್ಯು



(ನ್ಯೂಸ್ ಕಡಬ) newskadaba.com ಬೈಂದೂರು, ಸೆ. 16. ಸುಮನಾವತಿ ನದಿ ತೀರದಲ್ಲಿ ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಯೊಬ್ಬರು ಆಕಸ್ಮಿಕವಾಗಿ ಕಾಲು ಜಾರಿ ಹೊಳೆಗೆ ಬಿದ್ದು ಮೃತಪಟ್ಟ ಘಟನೆ ನಡೆದಿದೆ.





ಮೃತಪಟ್ಟವರನ್ನು ಶಿವರಾಜ (27) ಎಂದು ಗುರುತಿಸಲಾಗಿದೆ. ಇವರು ಮನೆಯಿಂದ ಕೂಲಿ ಕೆಲಸಕ್ಕೆಂದು ಹೋಗಿದ್ದು ಮನೆಗೆ ವಾಪಾಸ್‌ ಬಂದಿರಲಿಲ್ಲ. ಸೆ.15 ರಂದು ಸುಮನಾವತಿ ನದಿಯ ಉಪ್ಪುಂದ ಬ್ರಿಡ್ಜ್ ಬಳಿಯ ನದಿಯಲ್ಲಿ ಮೃತ ದೇಹ ದೊರೆತಿದೆ.






ಅವರು ಮನೆಗೆ ನಡೆದುಕೊಂಡು ವಾಪಾಸ್‌ ಆಗುತ್ತಿದ್ದ ವೇಳೆ ಭಾರೀ ಗಾಳಿ- ಮಳೆಗೆ ಆಕಸ್ಮಿಕವಾಗಿ ಕಾಲು ಜಾರಿ ಸುಮನಾವತಿ ಹೊಳೆಗೆ ಬಿದ್ದು ಮೃತಪಟ್ಟಿರಬಹುದು ಎನ್ನಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

error: Content is protected !!
Scroll to Top