ಅರಂತೋಡು- ಅಂಗಡಿಮಜಲು ರಸ್ತೆ ಕಾಮಗಾರಿಗೆ ಶಿಲಾನ್ಯಾಸ ಕಾರ್ಯಕ್ರಮ

(ನ್ಯೂಸ್ ಕಡಬ) newskadaba.com ಸುಳ್ಯ, ಸೆ. 16. ಅರಂತೋಡು ಗ್ರಾಮದ ಅಂಗಡಿಮಜಲು ರಸ್ತೆಯ ಕಾಂಕ್ರೀಟೀಕರಣಕ್ಕೆ ಸುಳ್ಯ ಶಾಸಕಾಭಿವೃಧ್ದಿ 20 ಲಕ್ಷ ರೂಪಾಯಿ ಅನುದಾನದಲ್ಲಿ ಅರಂತೋಡು ಅಂಗಡಿಮಜಲು ರಸ್ತೆಗೆ ಕಾಂಕ್ರೀಟೀಕರಣದ ಶಿಲಾನ್ಯಾಸ ಕಾರ್ಯಕ್ರಮವು ಸೆ.16 ರಂದು ನಡೆಯಿತು.

ಸುಳ್ಯ ಶಾಸಕ ಎಸ್. ಅಂಗಾರ ಶಿಲಾನ್ಯಾಸ ನೇರವೇರಿಸಿದರು. ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ್ ಸದಸ್ಯ ಹರೀಶ್ ಕಂಜಿಪಿಲಿ, ಸುಳ್ಯ ತಾಲೂಕು ಪಂಚಾಯತ್ ಉಪಾಧ್ಯಕ್ಷೆ ಶ್ರೀಮತಿ ಪುಷ್ಪಾ ಮೇದಪ್ಪ, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷೆ ಶ್ರೀಮತಿ ಲೀಲಾವತಿ ಕೊಡೆಂಕೇರಿ, ಅರಂತೋಡು ಗ್ರಾಮ ಪಂಚಾಯತ್ ಮಾಜಿ ಉಪಾಧ್ಯಕ್ಷ ಶಿವಾನಂದ ಕುಕ್ಕುಂಬಳ, ಗುತ್ತಿಗೆದಾರ ಮಹೇಶ್ ಕುತ್ತಮೊಟ್ಟೆ ಸೇರಿದಂತೆ ಪಂಚಾಯತ್ ಮಾಜಿ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

Also Read  ನಮ್ಮ ಮೆಟ್ರೊ 'ಹಳದಿ' ಮಾರ್ಗ: ಕಾರ್ಯಾಚರಣೆ ವಿಳಂಬಕ್ಕೆ ಕಾರಣ ತಿಳಿಸಿದ ಸಂಸದ ತೇಜಸ್ವಿ ಸೂರ್ಯ

 

 

error: Content is protected !!