ಕಡಬ ಮೂಲದ ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ *➤ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಿ ತುರ್ತು ಹಣದ ಬೇಡಿಕೆಯಿಟ್ಟ ವಂಚಕರು ➤ ಅಶೋಕ್ ಎಂಬವರ ಸಮಯಪ್ರಜ್ಞೆಯಿಂದ ವಂಚನಾ ಜಾಲ ಬೆಳಕಿಗೆ

(ನ್ಯೂಸ್ ಕಡಬ) newskadaba.com ಕಡಬ, ಸೆ.17. ಪೊಲೀಸ್ ಅಧಿಕಾರಿಯೋರ್ವರ ಹೆಸರಿನಲ್ಲಿ‌ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಕಡಬದ ವ್ಯಕ್ತಿಗೆ ಸಂದೇಶ ರವಾನಿಸಿ ಹಣದ ಅವಶ್ಯಕತೆ ತೋಡಿಕೊಂಡ ಘಟನೆ ಸೆಪ್ಟೆಂಬರ್ 17 ರಂದು ಬೆಳಗ್ಗೆ ನಡೆದಿದೆ‌.

ಕಡಬದ ಕೋಡಿಬೈಲು ನಿವಾಸಿ ಮೈಸೂರಿನ ಲಷ್ಕರ್ ಪೊಲೀಸ್ ಠಾಣೆಯಲ್ಲಿ ಇನ್ಸ್‌ಪೆಕ್ಟರ್ ಆಗಿರುವ ಸುರೇಶ್ ಕುಮಾರ್ ಅವರ ಹೆಸರಿನಲ್ಲಿ ನಕಲಿ ಫೇಸ್ಬುಕ್ ಖಾತೆ ತೆರೆದು ಕಡಬದ ಅಶೋಕ್ ಎಂಬವರಿಗೆ ಫ್ರೆಂಡ್ ರಿಕ್ವೆಸ್ಟ್ ಕಳುಹಿಸಲಾಗಿತ್ತು. ನಂತರ ಮೆಸೆಂಜರ್ ಮೂಲಕ 30 ಸಾವಿರ ತುರ್ತು ಹಣದ ಅಗತ್ಯವಿದ್ದು, ತಕ್ಷಣವೇ ಕಳುಹಿಸಿಕೊಡುವಂತೆ ಸಂದೇಶ ಬಂದಿತ್ತು. ಅನುಮಾನಗೊಂಡ ಅಶೋಕ್ ನೇರವಾಗಿ ಸುರೇಶ್ ಕುಮಾರ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿದಾಗ ಸತ್ಯಾಂಶ ಬಯಲಾಗಿದೆ. ಪೊಲೀಸ್ ಅಧಿಕಾರಿಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಜನರನ್ನು ಯಾಮಾರಿಸುವ ವಂಚಕರ ಜಾಲ ಸಕ್ರಿಯವಾಗಿದೆ. ಎಲ್ಲರೂ ಜಾಗರೂಕತೆಯಿಂದ ಇದ್ದು, ಇಂತಹ ಮೋಸಕ್ಕೆ ಬಲಿ ಬೀಳದಂತೆ ಪೊಲೀಸ್ ಅಧಿಕಾರಿ ಮನವಿ ಮಾಡಿದ್ದಾರೆ.

Also Read  ಕ್ರಿಕೆಟ್ ಪಂದ್ಯಾವಳಿ ವೇಳೆ ಇಬ್ಬರ ಹತ್ಯೆ ➤ PSI ಅಮಾನತು

error: Content is protected !!
Scroll to Top