(ನ್ಯೂಸ್ ಕಡಬ) newskadaba.com ಮಂಗಳೂರು, ಸೆ.18: ಜಿಲ್ಲೆಯಲ್ಲಿ ಇನ್ನುಮುಂದೆ ಯಾವುದೇ ಇಲಾಖೆಯ ಅಧಿಕಾರಿ, ಕೆಲಸಕ್ಕೆ ಸಂಬಂಧಪಟ್ಟಂತೆ ಹಣಕ್ಕೆ ಬೇಡಿಕೆಯಿಟ್ಟರೆ, ನನಗೆ ಅಥವಾ ಉಸ್ತುವರಿ ಸಚಿವರಿಗೆ,ಯಾ ಜಿಲ್ಲೆಯ ಬಿಜೆಪಿ ಶಾಸಕರಿಗೆ ಕರೆ ಮಾಡಿದರೆ, ಅಂತವರನ್ನು ನಿರ್ದಾಕ್ಷಿಣ್ಯವಾಗಿ ಮನೆಗೆ ಕಳುಹಿಸಲಾಗುವುದು ಹಾಗೂ ಬಂಧಿಸಲಾಗುವುದು ಎಂದು ಸಂಸದ ನಳಿನ್ ಕುಮಾರ್ ಕಟೀಲ್ ರವರು ತಿಳಿಸಿದ್ದಾರೆ.
ಪ್ರಧಾನಿ ಮೋದಿ ಅವರ 70ನೇ ಜ್ಮದಿನಾಚರಣೆ ಅಂಗವಾಗಿ ಜಿಲ್ಲಾ ಬಿಜೆಪಿ ಯುವ ಮೋರ್ಚಾ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ರಕ್ತದಾನ ಶಿಬಿರ ಹಾಗೂ ಮೋರ್ಚಾಗಳ ವತಿಯಿಂದ ನಡೆದ ಸೇವಾ ಸಪ್ತಾಪವನ್ನು ಜಿಲ್ಲಾ ಕಚೇರಿಯಲ್ಲಿ ಉದ್ಘಾಟಿಸಿ ಅವರು ಮಾತನಾಡಿದರು. ಈ ನಿಟ್ಟಿನಲ್ಲಿ ನನ್ನ ಕಚೇರಿ ಸೇರಿದಂತೆ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹಾಗೂ ಬಿಜೆಪಿಯ 7 ಶಾಸಕರು ಸಹಾಯವಾಣಿ ತೆರೆಯಲಿದ್ದಾರೆ. ಯಾವುದೇ ಅಧಿಕಾರಿ ಹಣ ಕೇಳಿದರೆ, ಅಥಾವ ಕುಣಿಸಿದರೆ ಜನ ಸಾಮಾನ್ಯರು ಆ ಸಹಾಯವಾಣಿಗೆ ಕರೆ ಮಾಡಿದರೆ ಸಾಕು ಭ್ರಷ್ಟಾಚಾರದ ಆರೋಪ ಎದುರಿಸುವ ಅಧಿಕಾರಿಯ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಾಗುವುದು . ಕಾನೂನುತ್ಮಕವಾಗಿ ಅಲ್ಲದಿದ್ದರೆ ಆರ್‍ಟಿಐ ಮೂಲಕವಾದರೂ ಕೇಸ್ ಮಾಡುತ್ತವೆ ಎಂದು ಭರವಸೆ ನೀಡಿದರು. ಮುಂದಿನ ದಿನಗಳಲ್ಲಿ ಜನ ಸಾಮಾನ್ಯರ ಕೆಲಸ ಕಾರ್ಯಗಳು ಜಿಲ್ಲೆಯಲ್ಲಿ ಸುಲಲಿತವಾಗಿ ಆಗಬೇಕು ಎನ್ನುವುದನ್ನು ದ. ಕ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ಹೇಳಿದ್ಧಾನೆ. ಡ್ರಗ್, ಮಾಫಿಯಾ ಸ್ಯಾಂಡ್ ಮಾಫಿಯಾ ಹಾಗೂ ಭ್ರಷ್ಟಾಚಾರ ಮುಕ್ತ ಜಿಲ್ಲೆಯನ್ನಾಗಿ ಮಾಡುವ ನಿಟ್ಟಿನಲ್ಲಿ ಹಲವು ಕ್ರಮಗಳನ್ನು ಪಕ್ಷದ ವತಿಯಿಂದ ಮುಂದಿನ ದಿನಗಳಲ್ಲಿ ಕೈಗೊಳ್ಳಲಾಗುತ್ತದೆ. ಎಂದು ಅವರು ಆಶ್ವಾಸನೆ ನೀಡಿದ್ದಾರೆ.