ಬಂಟ್ವಾಳ: ತಾಲೂಕು ಕಛೇರಿಯಲ್ಲಿ ಶಿರಸ್ತೇದಾರ್ ಆಗಿದ್ದ ರಾಧಾಕೃಷ್ಣ.ಕೆ ನಿಧನ

(ನ್ಯೂಸ್ ಕಡಬ) newskadaba.com ಬಂಟ್ವಾಳ, ಸೆ. 19. ಹೃದಯಾಘಾತದಿಂದ ವ್ಯಕ್ತಿಯೋರ್ವ ಮೃತಪಟ್ಟ ಘಟನೆ ಶನಿವಾರ ಮುಂಜಾನೆ ನಡೆದಿದೆ.

ಮೃತರನ್ನು ರಾಧಾಕೃಷ್ಣ. ಕೆ. (50) ಎಂದು ಗುರುತಿಸಲಾಗಿದೆ. ಕಳೆದ ಒಂದೂವರೆ ವರ್ಷಗಳಿಂದ ಬಂಟ್ವಾಳ ತಾಲೂಕು ಕಚೇರಿಯಲ್ಲಿ ಶಿರಸ್ತೇದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ಹೃದಯಾಘಾತದಿಂದ ಶನಿವಾರ ಮುಂಜಾನೆ ನಿಧನ ಹೊಂದಿದರು.

ಮೃತರು ಪತ್ನಿ, ಒಂದು ಗಂಡು, ಒಂದು ಹೆಣ್ಣು ಮಗುವನ್ನು ಅಗಲಿದ್ದಾರೆ. ಮೂಲತಃ ಶಿರ್ತಾಡಿಯವರಾಗಿದ್ದ ಅವರು ಸಕಲೇಶಪುರದಲ್ಲಿ ಕರ್ತವ್ಯ ಸಲ್ಲಿಸಿ, ಬಳಿಕ ಹಾಸನ ಜಿಲ್ಲಾಧಿಕಾರಿ ಕಚೇರಿಯಲ್ಲಿ ಕೆಲಸ ಮಾಡುತ್ತಿದ್ದು, ಬಳಿಕ ಹಾಸನದಿಂದ ಸಾಮಾಜಿಕ ಭದ್ರತೆ ವಿಭಾಗದ ಶಿರಸ್ತೇದಾರ್ ಆಗಿ ಕರ್ತವ್ಯಕ್ಕೆ ಭಡ್ತಿ ಹೊಂದಿ ಬಂಟ್ವಾಳ ತಾಲೂಕು ಕಚೇರಿಗೆ ಕಳೆದ ಒಂದೂವರೆ ವರ್ಷಗಳ ಹಿಂದೆ ಆಗಮಿಸಿದ್ದರು.

Scroll to Top