ಪುತ್ತೂರು: ಗಾಂಜಾ ಸೇವಿಸಿದ್ದ ಆರೋಪ ➤ ಇಬ್ಬರು ಅರೆಸ್ಟ್

(ನ್ಯೂಸ್ ಕಡಬ) newskadaba.com ಪುತ್ತೂರು, ಸೆ. 19. ಗಾಂಜಾ ನಶೆಯಲ್ಲಿದ್ದ ಇಬ್ಬರನ್ನು ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ಪುತ್ತೂರಿನ ಮುಕ್ರಂಪಾಡಿ ಎಂಬಲ್ಲಿ ನಡೆದಿದೆ.

ಮುಕ್ರಂಪಾಡಿಯ ಬಸ್ ನಿಲ್ದಾಣದ ಬಳಿ ನಿಲ್ಲಿಸಲಾಗಿದ್ದ ಕಾರೊಂದರ ಬಳಿ ಯುವಕರಿಬ್ಬರು ಅಸಭ್ಯವಾಗಿ ವರ್ತಿಸುತ್ತಿರುವುದನ್ನು ಕಂಡು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದು, ಸ್ಥಳಕ್ಕಾಗಮಿಸಿದ ಎಸ್.ಐ ಜಂಬುರಾಜ್ ಮಹಾಜನ್ ಆರೋಪಿಗಳಾದ ಅಬ್ದುಲ್ಲಾ, ಮೊಹಮ್ಮದ್ ಆರಿಫ್, ರಹಿಮಾನ್ ಖಾನ್ ಸಹಿತ ಕೇರಳ ನೋಂದಣಿಯ ಕಾರೋಂದನ್ನು ವಶಕ್ಕೆ ಪಡೆದಿದ್ದಾರೆ. ಬಳಿಕ ವೈದ್ಯಕೀಯ ಪರೀಕ್ಷೆಗೊಳಪಡಿಸಿದಾಗ ಇಬ್ಬರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ವೈದ್ಯರು ನೀಡಿದ ವರದಿಯಂತೆ ಇಬ್ಬರ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

Also Read  ಖಾಸಗಿ ಬಸ್ - ಕಂಟೇನರ್ ಲಾರಿ ನಡುವೆ ಭೀಕರ ಅಪಘಾತ ➤ ಲಾರಿ ಚಾಲಕ ಸಜೀವ ದಹನ | ವಾಹನಗಳೆರಡೂ ಸುಟ್ಟು ಭಸ್ಮ

error: Content is protected !!