ಕಾರು- ಸ್ಕೂಟರ್ ನಡುವೆ ಢಿಕ್ಕಿ ➤ ಸವಾರ ಸ್ಥಳದಲ್ಲೇ ಮೃತ್ಯು



(ನ್ಯೂಸ್ ಕಡಬ) newskadaba.com ಕುಂದಾಪುರ, ಸೆ. 21. ಸ್ಕೂಟರ್‌ಗೆ ಕಾರೊಂದು ಡಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ನಾವುಂದ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ನಡೆದಿದೆ.






ಮೃತರನ್ನು ನಾವುಂದ ನಿವಾಸಿ ಇಸ್ಮಾಯಿಲ್ (56) ಎಂದು ಗುರುತಿಸಲಾಗಿದೆ. ಮಾರುಕಟ್ಟೆಯಿಂದ ತನ್ನ ಮನೆಗೆ ಸ್ಕೂಟರ್‌ನಲ್ಲಿ ತೆರಳುತ್ತಿದ್ದಾಗ ಸ್ವಿಫ್ಟ್ ಕಾರೊಂದು ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ರಸ್ತೆಗೆ ಎಸೆಯಲ್ಪಟ್ಟ ಇವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಬೈಂದೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.






error: Content is protected !!
Scroll to Top