(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 22: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಾಳೆ ಆಶಾ ಕಾರ್ಯಕರ್ತೆಯರು ಸರ್ಕಾರದ ವಿರುದ್ಧ ಬೃಹತ್ ಧರಣಿ ನಡೆಸಲು ಮುಂದಾಗಿದ್ದಾರೆ. ಎಐಯುಟಿಯುಸಿ ವತಿಯಿಂದ ರಾಜ್ಯಮಟ್ಟದ ಬೃಹತ್ ಪ್ರತಿಭಟನೆ ನಡೆಸಲು ಮುಂದಾಗಿರುವ ಆಶಾ ಕಾರ್ಯಕರ್ತೆಯರು, ಸರ್ಕಾರಕ್ಕೆ ದುಡಿಯುವ ವರ್ಗದ ನೋವು ತಿಳಿಸಲು ಬೀದಿಗಿಳಿಯಲಿದ್ದಾರೆ.
ಮಾಸಿಕ ವೇತನ 12 ಸಾವಿರ ನಿಗದಿ ಪಡಿಸುವಂತೆ ಆಗ್ರಹಿಸಿ ಫ್ರೀಡಂ ಪಾರ್ಕ್ನಲ್ಲಿ ಅಹೋ ರಾತ್ರಿ ಧರಣಿ ನಡೆಸಲು ನಿರ್ಧರಿಸಿದ್ದಾರೆ. ಈ ಬಗ್ಗೆ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ. ನಾಗಲಕ್ಷ್ಮೀ ಮಾಹಿತಿ ನೀಡಿದ್ದು, ಆರೋಗ್ಯ ಸಚಿವರು ಜುಲೈನಲ್ಲಿ ಕೊಟ್ಟ ಮಾತು ಉಳಿಸಿಕೊಂಡಿಲ್ಲ. ದೊಡ್ಡವರು ಕೊಟ್ಟ ಭರವಸೆ ಹುಸಿಯಾಗಿದೆ. ಸರ್ಕಾರ ಕೊರೊನಾ ವಾರಿಯರ್ಸ್ ಶ್ರಮಕ್ಕೆ ಸ್ಪಂದಿಸಿ ಬೇಡಿಕೆ ಈಡೇರಿಸಬೇಕು ಎಂದು ಆಗ್ರಹಿಸಿದ್ದಾರೆ.