IPL ಬೆಟ್ಟಿಂಗ್ ➤ 6 ಮಂದಿ ಬಂಧನ, 6 ಲಕ್ಷ ರೂ. ವಶಕ್ಕೆ.!!

(ನ್ಯೂಸ್ ಕಡಬ) newskadaba.com ಬೆಂಗಳೂರು, ಸೆ. 23:  ಐಪಿಎಲ್-2020 ಬೆಟ್ಟಿಂಗ್ ನಡೆಸುತ್ತಿದ್ದ ಆರೋಪಿಗಳ ಮೇಲೆ ಸಿಸಿಬಿ ಪೊಲೀಸರು ಬುಧವಾರ ಬೆಳ್ಳಂಬೆಳಗ್ಗೆ ದಾಳಿ ನಡೆಸಿ ಆರು ಮಂದಿಯನ್ನು ಬಂಧಿಸಿದ್ದಾರೆ.

 

 

ಐಪಿಎಲ್ ಪಂದ್ಯದ ಹೆಸರಿನಲ್ಲಿ ಬೆಟ್ಟಿಂಗ್ ದಂಧೆ ನಡೆಸುತ್ತಿದ್ದಾರೆ ಎಂದು ಖಚಿತ ಮಾಹಿತಿ ಪಡೆದ ಪೊಲೀಸರು ಬಾಣಸವಾಡಿ ಮತ್ತು ಮಲ್ಲೇಶ್ವರಂನಲ್ಲಿ ಆರು ಮಂದಿಯನ್ನು ಬಂಧಿಸಿ ಅವರ ಬಳಿಯಿಂದ 6 ಲಕ್ಷ ರೂಪಾಯಿಗಳನ್ನು ವಶಪಡಿಸಿಕೊಂಡಿದ್ದಾರೆ. ಈ ಸಂಬಂಧ ಎರಡು ಕೇಸುಗಳು ದಾಖಲಾಗಿದೆ ಎಂದು ನಗರ ಅಪರಾಧ ದಳದ ಜಂಟಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

 

Scroll to Top