(ನ್ಯೂಸ್ ಕಡಬ) newskadaba.com ಮಂಗಳೂರು , ಸೆ. 24: ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಗ್ರಾಮಾಂತರ, ನಗರ ಸ್ಥಳೀಯ ಸಂಸ್ಥೆ ಹಾಗೂ ಮಹಾ ನಗರ ಪಾಲಿಕೆ ವ್ಯಾಪ್ತಿಯಲ್ಲಿ ಮಾಸ್ಕ್ ಬಳಕೆ ಕಡ್ಡಾಯ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ. ತಿಳಿಸಿದ್ದಾರೆ.
ಹೊಟೇಲ್, ರೆಸ್ಟೋರೆಂಟ್‌ಗಳು, ವಾಣಿಜ್ಯ ಸಂಕೀರ್ಣಗಳು, ಮಾಲ್‌ಗಳು, ಅಂಗಡಿಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲ ಸಿಬಂದಿ ಹಾಗೂ ಸಾರ್ವಜನಿಕರು ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರವನ್ನು ಕಡ್ಡಾಯ. ಪ್ರತಿ ಅಂಗಡಿ ಮಾಲಕರು ಸಾಮಾಜಿಕ ಅಂತರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸು ವುದು ಹಾಗೂ ನಿಯಮ ಉಲ್ಲಂಘನೆ ಯಾಗದಂತೆ ಸಾಕಷ್ಟು ಮುಂಜಾಗ್ರತೆ ವಹಿಸಬೇಕು ಎಂದು ತಿಳಿಸಿದ್ದಾರೆ.ಪ್ರಯಾಣಿಕರು ಧರಿಸದಿದ್ದರೆ ವಾಹನ ಮಾಲಕನಿಗೆ ದಂಡ ವಿಧಿಸಬೇಕು .
ಯಾವುದೇ ಅಂಗಡಿಗಳಲ್ಲಿ ಮಾಸ್ಕ್ ಧರಿಸದಿರುವುದು ಹಾಗೂ ಸಾಮಾಜಕ ಅಂತರ ಕಾಯ್ದುಕೊಳ್ಳದಿರುವುದು ಅಥವಾ ಷರತ್ತುಗಳ ಉಲ್ಲಂಘನೆ ಮಾಡಿದ್ದಲ್ಲಿ ಮೊದಲ ಬಾರಿಗೆ 1,000 ರೂ., ಎರಡನೇ ಮತ್ತು ಮೂರನೇ ಬಾರಿಗೆ ಕ್ರಮವಾಗಿ 2,000 ರೂ. ಮತ್ತು 3,000 ರೂ. ದಂಡವನ್ನು ವಿಧಿಸಿ ಎಚ್ಚರಿಕೆ ನೀಡಲು ಹಾಗೂ ಮೂರಕ್ಕಿಂತ ಹೆಚ್ಚು ಬಾರಿ ಷರತ್ತುಗಳನ್ನು ಉಲ್ಲಂಘಸಿದಲ್ಲಿ ಅಂಗಡಿಗಳ ಪರವಾನಿಗೆಯನ್ನು ರದ್ದುಪಡಿಸಲು ನಗರ ಸ್ಥಳೀಯ ಸಂಸ್ಥೆಗಳು ತಮ್ಮ ಹಂತದಲ್ಲಿ ಸೂಕ್ತ ಉಪನಿಯಮಗಳನ್ನು ರಚಿಸಿ ಅದನ್ನು ಅನಿಷ್ಠಾನಗೊಳಿಸಬೇಕು ಎಂದು ಸೂಚಿಸಿದ್ದಾರೆ.