ಕನ್ನಡದ ಖ್ಯಾತ ವಿಮರ್ಶಕ ಜಿ.ಎಸ್.ಆಮೂರ ವಿಧಿವಶ

(ನ್ಯೂಸ್ ಕಡಬ) newskadaba.com ಧಾರವಾಡ, ಸೆ. 28:  ಹಿರಿಯ ಸಾಹಿತಿ, ವಿಮರ್ಶಕ ಡಾಕ್ಟರ್ ಜಿ.ಎಸ್.ಆಮೂರ ಅವರು ಸೋಮವಾರ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದಾಗಿ ಬಳಲುತ್ತಿದ್ದ ಅವರು ಬೆಳಗ್ಗೆ 5ಗಂಟೆಗೆ ನಸುಕಿನಲ್ಲಿ ನಿಧನ ಹೊಂದಿದ್ದಾರೆ. ಅವರಿಗೆ 95 ವರ್ಷ ವಯಸ್ಸಾಗಿತ್ತು. ಜಿ.ಎಸ್. ಆಮೂರ ಅವರು ಕೇಂದ್ರ ಸಾಹಿತ್ಯ ಅಕಾಡೆಮಿ ಸೇರಿ, ಅನೇಕ ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.ಡಾ: ಜಿ.ಎಸ್.ಅಮೂರ ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.

‘ಅಧ್ಯಾಪಕರಾಗಿ ವೃತ್ತಿಜೀವನ ಪ್ರಾರಂಭಿಸಿದ ಅಮೂರ ಅವರು , ಆಗಲೇ ‘ಕಾಮಿಡಿಯ ಪರಿಕಲ್ಪನೆ’ ಎಂಬ ಮಹಾಪ್ರಬಂಧ ಬರೆದು ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡ ಮತ್ತು ಆಂಗ್ಲ ಭಾಷೆಯ ಮೇಲೆ ಪಾಂಡಿತ್ಯ ಹೊಂದಿದ್ದರು. ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ಪಂಪ ಪ್ರಶಸ್ಟಿ, ಬೇಂದ್ರೆ ಪ್ರಶಸ್ತಿ, ರಾಜ್ಯೋತ್ಸವ ಪುರಸ್ಕಾರ ಸೇರಿದಂತೆ ಹಲವು ಪ್ರಶಸ್ತಿಗಳು ಅವರಿಗೆ ಲಭಿಸಿವೆ.

 

 

error: Content is protected !!

Join the Group

Join WhatsApp Group