ಮಂಗಳೂರು: ಇನ್ಮುಂದೆ ಅಕ್ರಮ ಗೋ ಸಾಗಾಟಕ್ಕೆ ಬ್ರೇಕ್

(ನ್ಯೂಸ್ ಕಡಬ) newskadaba.com ಮಂಗಳೂರು, ಅ.10: ದಕ್ಷಿಣ ಕನ್ನಡ ಜಿಲ್ಲೆಯ ಕರಾವಳಿಯಲ್ಲಿ ಅಕ್ರಮ ಗೋ ಸಾಗಾಟವು ದಿನೇ ದಿನೇ ಹೆಚ್ಚುತ್ತಿರುವುದರಿಂದ ಇದೀಗ ಶಾಶ್ವತ ಬ್ರೇಕ್‌ ಹಾಕಲು ಪೊಲೀಸ್‌ ಇಲಾಖೆ ಮುಂದಾಗಿದೆ. ದ.ಕ ಜಿಲ್ಲೆಯಲ್ಲಿ ನಡೆಯಿತ್ತಿರುವ ಅಕ್ರಮ ಗೋ ಸಾಗಾಟ, ಅನೈತಿಕ ಪೊಲೀಸ್‌ಗಿರಿ ಹಾಗೂ ಇನ್ನಿತರ ಅಕ್ರಮ ಚಟುವಟಿಕೆಗಳನ್ನು ತಡೆಗಟ್ಟುವಲ್ಲಿ ಠಾಣಾಧಿಕಾರಿಗಳು ಮುತುವರ್ಜಿ ವಹಿಸಬೇಕು.

 

 

ಈ ಬಗ್ಗೆ ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ವಿಕಾಸ್‌ ಕುಮಾರ್‌ ಅವರು ಅದೇಶ ಹೊರಡಿಸಿದ್ದು, ಒಟ್ಟಿನಲ್ಲಿ ಅತೀ ಹೆಚ್ಚು ಅಕ್ರಮ ಗೋ ಸಾಗಾಟ ಪ್ರಕರಣಗಳು ದಾಖಲಾಗುತ್ತಿರುವ ಮಂಗಳೂರು ನಗರ ಪೊಲೀಸ್‌ ಕಮಿಷನರೇಟ್‌ ವ್ಯಾಪ್ತಿಯಲ್ಲಿ 24 ಗಂಟೆಗಳ ಪೊಲೀಸ್‌ ಚೆಕ್‌ ಪೋಸ್ಟ್‌ ಗಳ ನಿರ್ಮಾಣಕ್ಕೆ ಪೊಲೀಸ್‌ ಇಲಾಖೆ ಮುಂದಾಗಿದ್ದು, ಕಮಿಷನರೇಟ್‌ ವ್ಯಾಪ್ತಿಯ 32 ಕಡೆ ಚೆಕ್‌ ಪೋಸ್ಟ್‌ ರಚಿಸಲು ಕಮಿಷನರೇಟ್‌ ವ್ಯಾಪ್ತಿಯ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಸೂಚನೆ ನೀಡಿದ್ದಾರೆ. ಆಯಾ ಠಾಣಾ ವ್ಯಾಪ್ತಿಯಲ್ಲಿ ಚೆಕ್‌ ಪೊಸ್ಟ್‌ ಗಳನ್ನು ತೆರೆದು ಕಡ್ಡಾಯವಾಗಿ ಅಧಿಕಾರಿ ಹಾಗೂ ಸಿಬ್ಬಂದಿಗಳಿಗೆ ನಿಯೋಜಿಸಬೇಕು. ಅದಲ್ಲದೇ ಯಾವುದೇ ಕಾರಣಕ್ಕೂ ಸಿಬ್ಬಂದಿ ಕೊರತೆಯ ಹೇಳುವಂತಿಲ್ಲ ಎಂದು ಪೊಲೀಸ್‌ ಆಯುಕ್ತ ವಿಕಾಸ್‌ ಕುಮಾರ್‌ ಸ್ಪಷ್ಟಪಡಿಸಿದ್ದಾರೆ.

 

Also Read  ಕಡಬ: ಸರಸ್ವತೀ ವಿದ್ಯಾಲಯದಲ್ಲಿ ಗಾಂಧಿ ಜಯಂತಿ ಆಚರಣೆ- ಸ್ವಚ್ಛತಾ ಕಾರ್ಯಕ್ರಮ

 

error: Content is protected !!
Scroll to Top