(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ರಾಜ್ಯದಲ್ಲಿ ಮತ್ತೆ ಮಳೆ ತನ್ನ ಅಬ್ಬರವನ್ನು ಆರಂಭಿಸಿದ್ದು ಕಳೆದ ದಿನದಿಂದ ಗುಡುಗು ಮಿಂಚು ಸಹಿತ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಭಾರಿ ಮಳೆಯಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳ ಕರಾವಳಿ ಪ್ರದೇಶಗಳಲ್ಲಿಯೂ ಕಳೆದ ದಿನ ರಾತ್ರಿ ಗುಡುಗು ಸಹಿತ ಮಳೆಯಾಗಿದೆ. ಕರಾವಳಿ ಕರ್ನಾಟಕದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂದಿನ ಮೂರು ದಿನಗಳವರೆಗೆ ರಾಜ್ಯದಲ್ಲಿ ಮಳೆ ಸುರಿಯಲಿದ್ದು ಕರಾವಳಿ ಪ್ರದೇಶದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದ್ದು ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಲಾಗಿದೆ. ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅ.13 ರವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.