ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ➤ ಬಿಎಸ್ ವೈ ಸೂಚನೆ

(ನ್ಯೂಸ್ ಕಡಬ) newskadaba.com ಬೆಂಗಳೂರು, ಅ.11: ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ವ್ಯಾಪಕ ವಿರೋಧ ಕಂಡುಬಂದ ಹಿನ್ನಲೆಯಲ್ಲಿ ಸರ್ಕಾರದ ಈ ಆದೇಶದಂತೆ ಹಿಂಪಡೆದಿದೆ. ಅ.12 ರಿಂದ 30 ರವರೆಗೆ ಶಾಲಾ ಶಿಕ್ಷಕರಿಗೆ ಮಧ್ಯಂತರ ರಜೆ ನೀಡುವಂತೆ ಮುಖ್ಯಮಂತ್ರಿ ಬಿ.ಎಸ್‌ ಯಡಿಯೂರಪ್ಪ ಸೂಚಿಸಿದ್ದಾರೆ.

 

 

ಈ ಕುರಿತು ಸಿಎಂ ಬಿಎಸ್‌ ಯಡಿಯೂರಪ್ಪ ಇಂದು ಅದೇಶ ನೀಡಿದ್ದು, ಕೋವಿಡ್‌ ಸೋಂಕಿನ ಹಿನ್ನಲೆಯಲ್ಲಿ ಸದ್ಯ ಶಾಲೆಗಳನ್ನು ಪ್ರಾರಂಭಿಸದಿರಲು ಮತ್ತು ವಿದ್ಯಾಗಮ ಕಾರ್ಯಕ್ರಮವನ್ನು ಸ್ಥಗಿತಗೊಳಿಸಲು ಈಗಾಗಲೇ ಆದೇಶಿಸಲಾಗಿದೆ ಎಂದಿದ್ದಾರೆ. ಶಿಕ್ಷಕರ ಮಧ್ಯಂತರ ರಜೆಯನ್ನು ಕಡಿತಗೊಳಿಸಿದ್ದ ರಾಜ್ಯ ಸರ್ಕಾರದ ನಡೆಗೆ ಮಾಜಿ ಮುಖ್ಯಮಂತ್ರಿ ಎಚ್‌ ಡಿ ಕುಮಾರಸ್ವಾಮಿ ತೀವ್ರ ವಿರೋಧ ವ್ಯಕ್ತಪಡಿಸಿದ್ದರು.

Also Read  ಕಡಬ: ತ್ಯಾಜ್ಯ ಸಾಗಾಟಕ್ಕೆ ಟೆಂಪೊ ವಾಹನ ಒದಗಿಸುವಂತೆ, ಪ್ರವಾಸಿ ಮಂದಿರ ದುರಸ್ತಿಗಾಗಿ► ಜಿ.ಪಂ.ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ

error: Content is protected !!