(ನ್ಯೂಸ್ ಕಡಬ) newskadaba.com ಮೈಸೂರು, ಅ.14: ವಿಶ್ವವಿಖ್ಯಾತ ಮೈಸೂರು ದಸರಾಗೆ ಸಿದ್ಧತೆ ಜೋರಾಗಿ ನಡೆಯುತ್ತಿದ್ದು, ಅ. 17ರಿಂದ ಮೈಸೂರಿನಲ್ಲಿ ದಸರಾ ಉತ್ಸವದ ಕಳೆ ತುಂಬಲಿದೆ. ಈಗಾಗಲೇ ಅಂಬಾರಿ ಹೊರುವ ಗಜಪಡೆಗೆ ಎಲ್ಲ ರೀತಿಯ ಸಿದ್ಧತೆ ನಡೆಸಲಾಗುತ್ತಿದೆ.
ದಸರಾ ಉತ್ಸವದಲ್ಲಿ ಚಾಮುಂಡಿ ಬೆಟ್ಟದಲ್ಲೂ ಸಾಕಷ್ಟು ಸಾಂಪ್ರದಾಯಿಕ ಪೂಜೆಗಳು ನಡೆಯುವುದರಿಂದ ಇಂದು ಮಧ್ಯರಾತ್ರಿಯಿಂದ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಅ. 14ರ ಮಧ್ಯರಾತ್ರಿಯಿಂದ ಅ.18ರ ಮಧ್ಯರಾತ್ರಿಯವರೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ.