(ನ್ಯೂಸ್ ಕಡಬ) newskadaba.com ಸುರತ್ಕಲ್ ಅ. 14: ಬಾಲಕಿಯೊಬ್ಬಲಿಗೆ ಅತಿಯಾಗಿ ಮೊಬೈಲ್ ಬಳಸಬೇಡ ಎಂದು ಬುದ್ದಿ ಮಾತು ಹೇಳಿದಕ್ಕೆ ಆಕ್ರೋಶಗೊಂಡ ಬಾಲಕಿ ಆತ್ಮಹತ್ಯೆಗೆ ಶರಣಾದ ಘಟನೆ ಸುರತ್ಕಲ್ ಬಳಿಯ ಕುಳಾಯಿಯ ಗೋಕುಲದಲ್ಲಿ ನಡೆದಿದೆ.
ಸುಜೇತಾ(16) ಆತ್ಮಹತ್ಯೆಗೆ ಶರಣಾದ ಬಾಲಕಿ. ಈಕೆ ಅತಿಯಾಗಿ ಮೊಬೈಲ್ ಬಳಸುತ್ತಿದ್ದಳು. ಇದರಿಂದ ಆಕೆಯ ತಾಯಿ ಬಾಲಕಿಗೆ ಬುದ್ದಿ ಮಾತು ಹೇಳಿದ್ದಾರೆ. ಇದರಿಂದ ಮನನೊಂದ ಸುಜೇತಾ ಮನೆಯ ಕೋಣೆಯಲ್ಲಿ ಫ್ಯಾನಿಗೆ ಸೀರೆ ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ತಿಳಿದು ಬಂದಿದೆ.