ಉಪ್ಪಿನಂಗಡಿ: ಅಕ್ರಮ ಮರ ಸಾಗಾಟ ➤ ವಾಹನ ಸಹಿತ ಆರೋಪಿ ವಶಕ್ಕೆ



(ನ್ಯೂಸ್ ಕಡಬ) newskadaba.com ಉಪ್ಪಿನಂಗಡಿ, ಅ.14: ರಾಷ್ಟೀಯ ಹೆದ್ದಾರಿ 75 ರಲ್ಲಿ ಮಠ ಎಂಬಲ್ಲಿ ನದಿ ಬದಿಯಲ್ಲಿದ್ದ ಜಾಗದಿಂದ ಅಕ್ರಮವಾಗಿ ಮರಗಳನ್ನು ಕಡಿದು ಸಾಗಾಟ ಮಾಡುತ್ತಿದ್ದ ಪ್ರಕರಣವನ್ನು ಪೊಲೀಸರು ದಾಖಲಿಸಿಕೊಂಡಿದ್ದಾರೆ.





 

 

ಉಪ್ಪಿನಂಗಡಿ ಅರಣ್ಯ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ ತಪಾಸಣೆಗೆ ಒಳಪಡಿಸಿದಾಗ ಯಾವುದೇ ದಾಖಲೆ ಪತ್ರವಿಲ್ಲದೆ ಮರಗಳನ್ನು ಕಡಿದು ಹಾಕಿ ದಿಮ್ಮಿಗಳನ್ನಾಗಿ ಮಾಡಿ ಸಾಗಾಟ ಮಾಡುತ್ತಿದ್ದು, ಲಾರಿ ಚಾಲಕ ಅಬೂಬಕ್ಕರ್‌ ಎಂಬಾತನನ್ನು ವಶಕ್ಕೆ ತೆಗೆದುಕೊಂಡು ವಾಹನವನ್ನು ಮುಟ್ಟುಗೋಲು ಹಾಕಿಕೊಂಡಿದ್ದಾರೆ.






 

error: Content is protected !!
Scroll to Top